ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ಕೋಟಿ ಮನೆಗಳಲ್ಲಿ ರಾಷ್ಟ್ರ ಧ್ವಜ ಹಾರಿಸುವ ಗುರಿ: ಬಸವರಾಜ ಬೊಮ್ಮಾಯಿ

Last Updated 9 ಆಗಸ್ಟ್ 2022, 7:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಧ್ವಜ ವಿತರಣೆ ಕಾರ್ಯ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸ ವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಮನೆ– ಮನೆಯಲ್ಲಿ ರಾಷ್ಟ ಧ್ವಜ ಹಾರಿಸುವ ‘ಹರ್‌ ಘರ್‌ ತಿರಂಗ’ ಅಭಿಯಾನದ ಕುರಿತು ಸೋಮವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಅಧಿಕಾರಿ ಗಳ ಸಭೆ ನಡೆಸಿದ ಅವರು, ಆಗಸ್ಟ್‌ 13 ರಂದೇ ಧ್ವಜಹಾರಿಸುವ ಮೂಲಕ ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮದ ವಾತಾವರಣ ನಿರ್ಮಾಣವಾಗಬೇಕು ಎಂದು ಅವರು ಸೂಚಿಸಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿ ಯಂತೆ ಸರ್ಕಾರಿ ಕಚೇರಿಗಳಲ್ಲಿ ಈ ಮೂರು ದಿನಗಳಂದು ಪ್ರತಿ ದಿನ ಬೆಳಿಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಇಳಿಸಬೇಕು. ಆದರೆ, ಮನೆ– ಮನೆಗಳಲ್ಲಿ ಆಗಸ್ಟ್‌ 13 ರಂದು ಧ್ವಜಾರೋಹಣ ಮಾಡಿದರೆ, ಆ.15 ರವರೆಗೆ ಇರಿಸಬಹುದಾಗಿದೆ ಎಂದು ತಿಳಿಸಿದರು.

ಮುಖ್ಯ ಕಾರ್ಯದರ್ಶಿಗಳು ಮತ್ತೊಮ್ಮೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ನಿಗದಿತ ಗುರಿ ಸಾಧಿಸಲು ಜಿಲ್ಲಾಡಳಿತಗಳಿಗೆ ಮಾರ್ಗದರ್ಶನ ನೀಡಬೇಕು. ಇದರೊಂದಿಗೆ ಕ್ವಿಟ್‌ ಇಂಡಿಯಾ ಚಳವಳಿಯ ಸ್ಮರಣಾರ್ಥ, ಆಯಾ ಜಿಲ್ಲೆಗಳ ಸ್ವಾತಂತ್ರ್ಯ ಹೋರಾಟಗಾರರನ್ನು ಆಗಸ್ಟ್‌ 9 ರಿಂದ 14ರ ನಡುವೆ, ಅವರ ಮನೆಗಳಿಗೇ ತೆರಳಿ ಸನ್ಮಾನಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರೂ ಇದರಲ್ಲಿ ಭಾಗಿಯಾಗುವಂತೆ ಬೊಮ್ಮಾಯಿ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT