ಗುರುವಾರ , ನವೆಂಬರ್ 26, 2020
22 °C
ಸಿ.ಎಂಗೆ ಆಯುಕ್ತ, ಆಡಳಿತಾಧಿಕಾರಿಯಿಂದ ಮಾಹಿತಿ

ಮಳೆ ಅವಾಂತರ: ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಆಯುಕ್ತರಿಗೆ ಶನಿವಾರ ಬೆಳಿಗ್ಗೆ ಕರೆ ಮಾಡಿದ ಮುಖ್ಯಮಂತ್ರಿ, ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಕೈಗೊಂಡ ಕ್ರಮಗಳ ಬಗ್ಗೆ ತಕ್ಷಣ ಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

‘ಮುಖ್ಯಮಂತ್ರಿಯವರ ಸೂಚನೆಯಂತೆ ಆಯುಕ್ತರು ಮತ್ತು ಆಡಳಿತಾಧಿಕಾರಿ ಗೌರವ ಗುಪ್ತಾ ಮತ್ತು ಇತರ ಅಧಿಕಾರಿಗಳು ನಗರ ವಿವಿಧ ಪ‍್ರದೇಶಗಳಿಗೆ ಭೇಟಿ ನೀಡಿದ್ದಾರೆ. ಎಲ್ಲ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಆಯುಕ್ತರು ಮತ್ತು ಆಡಳಿತಾಧಿಕಾರಿ ಮುಖ್ಯಮಂತ್ರಿಯನ್ನು ಭೇಟಿ ನೀಡಿ ಮಾಹಿತಿ ನೀಡಲಿದ್ದಾರೆ’ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ.

‘ಶನಿವಾರ ಮತ್ತು ಭಾನುವಾರ ಕೂಡಾ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಕಟ್ಟೆಚ್ಚರವಾಗಿ ವಹಿಸಬೇಕು’ ಎಂದೂ ಆಯುಕ್ತರಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು