ಬೆಂಗಳೂರು: ಬಸ್ ಪ್ರಯಾಣ ದರಗಳನ್ನು ಹೆಚ್ಚಿಸುವ ಕುರಿತು ಯಾವುದೇ ತೀರ್ಮಾನ ಇನ್ನೂ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟದ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸರ್ಕಾರ ಸಲ್ಲಿಸಿದ ಮಸೂದೆಗಳಿಗೆ ಸ್ಪಷ್ಟೀಕರಣ ಕೋರಿ ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಈ ಮಸೂದೆಗಳು ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಅಂಗೀಕೃತಗೊಂಡಿದ್ದವು ಎಂದರು.