ಬೆಂಗಳೂರು: ಕರ್ನಾಟಕದಲ್ಲಿ ಸೂಕ್ಷ್ಮ ಹಾಗೂ ಸಣ್ಣ, ಮಧ್ಯಮ ಉದ್ಯಮಗಳ (ಎಂಎಸ್ಎಂಇ) ಕಾರ್ಯಕ್ಷಮತೆ, ತಂತ್ರಜ್ಞಾನ ಬಳಕೆ ಪ್ರಮಾಣ ಹೆಚ್ಚಿಸಿ ಹೂಡಿಕೆದಾರರಿಗೆ ಪೂರಕ ವ್ಯವಹಾರ ವಾತಾವರಣ ನಿರ್ಮಿಸಲು ಸರ್ಕಾರ ಒತ್ತು ನೀಡುತ್ತಿದೆ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಪೀಣ್ಯ ಕೈಗಾರಿಕಾ ಸಂಘದ ಸಹಯೋಗದಲ್ಲಿ ಅರಮನೆ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ 3ನೇ ಆವೃತ್ತಿಯ ಎಫ್ಕೆಸಿಸಿಐ ಜಾಗತಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ತಂತ್ರಜ್ಞಾನ ಮತ್ತು ಮಾರುಕಟ್ಟೆ ಬೆಂಬಲ ಸಿಕ್ಕರೆ ಸಣ್ಣ ಉದ್ಯಮಗಳೂ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸಾಧ್ಯವಾಗಲಿದೆ. ಈ ವಲಯ ಕೇವಲ ಉತ್ಪಾದನೆ, ರಫ್ತುಗಳಿಗೆ ಸೀಮಿತವಾಗದೇ ಸ್ಥಳೀಯ ಉದ್ಯೋಗಾವಕಾಶಗಳ ಸೃಷ್ಟಿ ಮೂಲಕ ದೇಶದ ಸುಸ್ಥಿರ ಆರ್ಥಿಕ ಅಭಿವೃದ್ಧಿಗೂ ದಾರಿಯಾಗಲಿದೆ’ ಎಂದು ತಿಳಿಸಿದರು.

‘ಡಿಜಿಟಲ್ ವೇದಿಕೆ, ಸ್ವಯಂಚಾಲಿತ ವ್ಯವಸ್ಥೆ, ಕೃತಕ ಬುದ್ಧಿಮತ್ತೆ, ಇಂಡಸ್ಟ್ರಿ 4.0 ಪರಿಹಾರ, ಇ-ಕಾಮರ್ಸ್ ಪರಿಸರ ವ್ಯವಸ್ಥೆ ಅಳವಡಿಸಿಕೊಳ್ಳಲು ಉತ್ತೇಜಿಸುತ್ತಿದ್ದೇವೆ. ಹೊಸತನವೀಗ ದೊಡ್ಡ ಕಂಪನಿಗಳಿಗೆ ಸೀಮಿತವಾಗದೇ ಎಂಎಸ್ಎಂಇಗಳೂ ಜಾಗತಿಕ ಮೌಲ್ಯ ಸರಪಳಿಗಳ ಭಾಗವಾಗಲು ಅವಕಾಶ ಒದಗಿಸುತ್ತಿದೆ’ ಎಂದರು.

ವಿದ್ಯುತ್ ದರ ತಗ್ಗಿಸಿ: ಎಫ್ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ ಮಾತನಾಡಿ, ಸರ್ಕಾರವು ವಿದ್ಯುತ್ ದರವನ್ನು ಏರಿಕೆ ಮಾಡಿರುವುದು ಎಂಎಸ್ಎಂಇ ಮೇಲೆ ಪರಿಣಾಮ ಬೀರಿದೆ. ಹೊರೆ ತಗ್ಗಿಸಲು ವಿದ್ಯುತ್ ದರ ಪರಿಷ್ಕರಣೆಗೆ ಸರ್ಕಾರ ಮುಂದಾಗಬೇಕು. ರಾಜ್ಯದಲ್ಲಿ ಎಂಎಸ್ಎಂಇಗಳಿಗೆ ಪ್ರತ್ಯೇಕ ನೀತಿ ರೂಪಿಸಲು ಒತ್ತು ನೀಡಿ ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಹಲವು ಸವಾಲುಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಮೂಲ ಸೌಕರ್ಯ ಕೊಡಿ: ಪೀಣ್ಯ ಕೈಗಾರಿಕೆ ಸಂಘದ ಅಧ್ಯಕ್ಷ ಡಿ.ಪಿ.ದಾನಪ್ಪ ಮಾತನಾಡಿ, ‘ಕೈಗಾರಿಕಾ ವಲಯದಿಂದ ಹೆಚ್ಚಿನ ತರಿಗೆಯನ್ನು ಸರ್ಕಾರ ಸಂಗ್ರಹಿಸುತ್ತಿದ್ದರೂ ಅದಕ್ಕೆ ಪೂರಕವಾಗಿ ಮೂಲಸೌಕರ್ಯ ಒದಗಿಸುತ್ತಿಲ್ಲ.ಜಾಗತಿಕ ಸಂಘರ್ಷದ ಕಾರಣದಿಂದ ಕಚ್ಚಾವಸ್ತುಗಳು ಬೆಲೆಯಲ್ಲಿ ಏರಿಕೆಯಾಗಿ ಉತ್ಪಾದನೆ ಮೇಲೆ ಹೊರೆಯಾಗುತ್ತಿದೆ. ಇದರಿಂದ ಸುಂಕ ಇಳಿಕೆಗೆ ಆದ್ಯತೆ ನೀಡುವುದು ಒಳ್ಳೆಯದು’ ಎಂದು ಮನವಿ ಮಾಡಿದರು.

ಬ್ರಿಟಿಷ್ ಉಪ ಹೈ ಕಮಿಷನರ್ ಒವೆನ್ ರಿಚರ್ಡ್ಸ್, ಭಾರತೀಯ ಸ್ಟೇಟ್ ಬ್ಯಾಂಕ್ನ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ, ಎಂಎಸ್ಎಂಇ ಸಮಾವೇಶದ ಅಧ್ಯಕ್ಷ ತಿಪ್ಪೇಶಪ್ಪ, ಎಫ್ಕೆಸಿಸಿಐ ಹಿರಿಯ ಉಪಾಧ್ಯಕ್ಷ ಟಿ. ಸಾಯಿರಾಂ ಪ್ರಸಾದ್, ಬಿ.ಪಿ. ಶಶಿಧರ್, ಮಾಜಿ ಅಧ್ಯಕ್ಷ ಎಂ.ಸಿ. ದಿನೇಶ್, ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.