ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಸಂಕಷ್ಟ ನಿವಾರಿಸುತ್ತಿರುವ ‘ಗ್ಯಾರಂಟಿ’ಗಳು: ರಕ್ಷಾ ರಾಮಯ್ಯ

Published 19 ಏಪ್ರಿಲ್ 2024, 16:01 IST
Last Updated 19 ಏಪ್ರಿಲ್ 2024, 16:01 IST
ಅಕ್ಷರ ಗಾತ್ರ

ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ರೋಡ್‌ ಶೋ ನಡೆಸಿ ಮತಯಾಚಿಸಿದರು.

ಮಾಜಿ ಶಾಸಕ ಪ್ರಸನ್ನ ಕುಮಾರ್, ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಕೇಶವ ರಾಜಣ್ಣ, ಗೋಪಾಲ್ ಕೃಷ್ಣ, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರೋಡ್‌ ಶೋನಲ್ಲಿ ಭಾಗಿಯಾದರು. ಎಲ್ಲೆಡೆ ಜೈಕಾರ ಮೊಳಗಿತು. ಕಾರ್ಯಕರ್ತರು ಪುಷ್ಪಾರ್ಚನೆ ಮೂಲಕ ರಕ್ಷಾ ರಾಮಯ್ಯ ಅವರನ್ನು ಸ್ವಾಗತಿಸಿದರು.

ರಕ್ಷಾ ರಾಮಯ್ಯ ಅವರು ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಕ್ಷೇತ್ರದ ವಿವಿಧ ರಸ್ತೆಗಳಲ್ಲಿ ಪ್ರಚಾರ ನಡೆಸಿದರು. ಕೆಂಪೇಗೌಡರ ಪ್ರತಿಮೆ, ಪುನೀತ್ ರಾಜ್ ಕುಮಾರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಬಡಾವಣೆ ರಸ್ತೆ, ಮಸೀದಿ ರಸ್ತೆ, ಡೌನ್ ಬಜಾರ್ ರಸ್ತೆ, ಒಎಂಎಸ್ ರಸ್ತೆ, ಹೊಸಬೀದಿ, ಡೌನ್ ಬಜಾರ್ ರಸ್ತೆ, ಕೆಂಪೇಗೌಡ ಪ್ರತಿಮೆ, ಚಿಕ್ಕಬೊಮ್ಮಸಂದ್ರ ಕ್ರಾಸ್‌, ಅಟ್ಟೂರು ಮುಖ್ಯರಸ್ತೆ, ಶನಿ ಮಹಾತ್ಮ ದೇವಸ್ಥಾನ ಸುತ್ತಮುತ್ತ ರೋಡ್‌ ಶೋ ನಡೆಸಿದರು.

‘ಹಸಿವು ಮುಕ್ತ ಕರ್ನಾಟಕ ಕಾಂಗ್ರೆಸ್ ಗುರಿಯಾಗಿದ್ದು, ಬಡತನ ನಿರ್ಮೂಲನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಆದ್ಯತೆ ನೀಡುತ್ತಿದೆ. ಬಿಜೆಪಿ ಸುಳ್ಳು ಭರವಸೆಗಳ ಮೂಲಕ ಜನರನ್ನು ವಂಚಿಸಿದೆ. ಹತ್ತು ವರ್ಷಗಳಲ್ಲಿ ಇಪ್ಪತ್ತು ಕೋಟಿ ಉದ್ಯೋಗ ಸೃಷ್ಟಿಯಾಗಬೇಕಾಗಿತ್ತು. ಉದ್ಯೋಗ ಸೃಜನೆಯಲ್ಲಿ ಶೇ 5 ರಷ್ಟು ಸಾಧನೆ ಮಾಡಿಲ್ಲ’ ಎಂದು ರಕ್ಷಾ ರಾಮಯ್ಯ ಟೀಕಿಸಿದರು.

‘ಕಾಂಗ್ರೆಸ್ ಬಡವರ ಪರವಾಗಿದ್ದು, ಜನ ಸಾಮಾನ್ಯರ ಹಿತ ರಕ್ಷಣೆಗೆ ಬದ್ಧವಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಇದಕ್ಕೆ ಸ್ವಷ್ಟ ಉದಾಹರಣೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಸಂಕಷ್ಟಗಳನ್ನು ನಿವಾರಣೆ ಮಾಡುತ್ತಿವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT