ಬೆಂಗಳೂರು: ಚಿಕ್ಕಬಾಣಾವಾರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಐಐಎಚ್ಆರ್ ಸಮೀಪದ ಸರಕು ಸಾಗಣೆ ಆಟೊ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ತೋಟದಗುಡ್ಡದ ಹಳ್ಳಿ ನಿವಾಸಿ ಪವನ್ಕುಮಾರ್ (20) ಮೃತ ವಿದ್ಯಾರ್ಥಿ.

ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಐಐಎಚ್ಆರ್ ಸಮೀಪದಲ್ಲಿ ದುರ್ಘಟನೆ ನಡೆದಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಮಂಗಳವಾರ ಪವನ್ಕುಮಾರ್ ಅವರ ಜನ್ಮದಿನವಿತ್ತು. ಸ್ನೇಹಿತರ ಜತೆಗೆ ಜನ್ಮದಿನ ಆಚರಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ ಆಗುತ್ತಿದ್ದರು. ಹೆಸರುಘಟ್ಟ ಮುಖ್ಯರಸ್ತೆಯ ಐಐಎಚ್ಆರ್ ಸಮೀಪ ವೇಗವಾಗಿ ಬಂದ ಸರಕು ಸಾಗಣೆ ಆಟೊವೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದ ಪವನ್ಕುಮಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಪವನ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಅಪಘಾತ ಎಸಗಿದ ಬಳಿಕ ಸರಕು ಸಾಗಣೆ ಆಟೊದ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿ ಆಗಿದ್ದಾನೆ. ಆತನ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಚಿಕ್ಕಬಾಣಾವಾರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.