‘ಈಗಾಗಲೇ ಕೆರೆಯ ಅಂಗಳದಲ್ಲಿದ್ದ ಜೊಂಡು, ಗಿಡಗಂಟಿಗಳನ್ನು ತೆಗೆಯಲಾಗಿದೆ. ಕೆರೆಯ ಹೂಳು ತೆಗೆದು ವಾಕಿಂಗ್ ಪಾತ್ ನಿರ್ಮಿಸಲಾಗುತ್ತಿದೆ.
ಈಗಾಗಲೇ ಶೇ 40ರಷ್ಟು ಕೆಲಸ ಮುಗಿದಿದೆ’ ಎಂದು ಪುರಸಭೆ ಮುಖ್ಯ ಅಧಿಕಾರಿ ಎಚ್.ಎ. ಕುಮಾರ್ ಮಾಹಿತಿ ನೀಡಿದರು. ‘ಮನೆ, ಕೈಗಾರಿಕೆ, ಅಪಾರ್ಟ್‌ಮೆಂಟ್, ರಾಜಕಾಲುವೆಗಳಿಂದ ಬರುತ್ತಿದ್ದ ಕಲುಷಿತ ನೀರು ಕೆರೆಗೆ ಬಾರದಂತೆ ತಡೆಯಲಾಗಿದೆ. ಕೆರೆ ಮಣ್ಣು, ಕಲುಷಿತ ನೀರು ತೆಗೆದು ಸುತ್ತಲೂ ಸಂರಕ್ಷಣೆ ಮಾಡುತ್ತಿದ್ದಾರೆ’ ಎಂದು ಸ್ಥಳೀಯ ನಿವಾಸಿ ಬಿ.ಎಂ. ಚಿಕ್ಕಣ್ಣ ಮಾಹಿತಿ ನೀಡಿದರು.