ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಜಾಲ: ಆಂಬುಲೆನ್ಸ್ ಗುದ್ದಿ ಇಬ್ಬರು ಪಾದಚಾರಿಗಳು ಸಾವು

Last Updated 21 ಮಾರ್ಚ್ 2023, 22:16 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಜಾಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಅಪಘಾತ ಸಂಭವಿಸಿದ್ದು, ಆಂಬುಲೆನ್ಸ್ ಗುದ್ದಿ ಇಬ್ಬರು ಪಾದಚಾರಿಗಳು ಮೃತಪಟ್ಟಿದ್ದಾರೆ.

‘ಬನಶಂಕರಿಯ ನಾಗೇಂದ್ರ ಹಾಗೂ ಮೈಸೂರಿನ ಪ್ರಕಾಶ್ ಮೃತರು. ಆಂಬುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ. ಅಪಘಾತದ ನಂತರ ಚಾಲಕ ಪರಾರಿಯಾಗಿದ್ದಾನೆ. ಆಂಬುಲೆನ್ಸ್‌ನಲ್ಲಿ ಆತನ ಜೊತೆಗಿದ್ದ ವಿವೇಕ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕಾಫಿ ಮಾರಾಟ ಕಂ‍ಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಹಾಗೂ ಪ್ರಕಾಶ್ ಕಂಪನಿ ವತಿಯಿಂದ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ತರಬನಹಳ್ಳಿಯ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು. ಅವರಿಬ್ಬರೂ ಮಂಗಳವಾರ ಬೆಳಿಗ್ಗೆ ರೆಸಾರ್ಟ್‌ನಿಂದ ಹೊರಬಂದು ಕಾಫಿ ಕುಡಿಯಲು ಹೋಟೆಲ್‌ನತ್ತ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು.’

‘ರೋಗಿ ಇಲ್ಲದಿದ್ದರೂ ಚಾಲಕ ಸೈರನ್ ಹಾಕಿಕೊಂಡು ಅತಿ ವೇಗವಾಗಿ ನಿರ್ಲಕ್ಷ್ಯದಿಂದ ಆಂಬುಲೆನ್ಸ್ ಚಲಾಯಿಸಿದ್ದ. ರಸ್ತೆಯಲ್ಲಿ ಹೊರಟಿದ್ದ ನಾಗೇಂದ್ರ ಹಾಗೂ ಪ್ರಕಾಶ್‌ ಅವರಿಗೆ ಆಂಬುಲೆನ್ಸ್ ಗುದ್ದಿತ್ತು. ತೀವ್ರ ಗಾಯಗೊಂಡ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಗೇಂದ್ರ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು’ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT