ಶನಿವಾರ, ಜೂನ್ 25, 2022
24 °C

ಕೋವಿಡ್: ಚಿಕ್ಕನಹಳ್ಳಿ ಗ್ರಾ.ಪಂ. ಮಾದರಿ ಕಾರ್ಯ- ಎಸ್.ಟಿ. ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜರಾಜೇಶ್ವರಿನಗರ: ‘ರಾಜ್ಯದಲ್ಲಿಯೇ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಯು ಕೋವಿಡ್‌ ನಿರ್ವಹಣೆಯಲ್ಲಿ ಮಾದರಿ ಕಾರ್ಯ ಮಾಡುತ್ತಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಶ್ಲಾಘಿಸಿದರು.

ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನಾಗರಿಕರಿಗೆ ದಿನಸಿ ಕಿಟ್‌ ಮತ್ತು ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಸಾವಿರ ಪರಿಹಾರ ವಿತರಿಸಿ ಮಾತನಾಡಿದ ಅವರು, ‘ಪಂಚಾಯಿತಿಯು ಅಂಗವಿಕಲರಿಗೆ ₹10 ಸಾವಿರ, ಆಶಾ ಕಾರ್ಯಕರ್ತರಿಗೆ ₹5 ಸಾವಿರ, ಅಂಗನವಾಡಿ ಕಾರ್ಯಕರ್ತೆಯರು, ಆಸ್ಪತ್ರೆ ಸಿಬ್ಬಂದಿ,  ಆಂಬುಲೆನ್ಸ್ ಚಾಲಕರು ಮತ್ತು ಸಹಾಯಕರಿಗೆ ತಲಾ ₹3 ಸಾವಿರ ಸಹಾಯಧನ ಮತ್ತು ಸಾನಿಟೈಸರ್, ಮಾಸ್ಕ್, ವೈದ್ಯಕೀಯ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ’ ಎಂದರು.

‘ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ವತಿಯಿಂದಲೂ ಗ್ರಾಮೀಣ ಪ್ರದೇಶದ ಜನರಿಗೆ ಸಹಾಯಹಸ್ತ ಚಾಚುವ ಮೂಲಕ ನೋವಿನಲ್ಲಿರುವವರಿಗೆ ಸಹಾಯ ಮಾಡಬೇಕಾಗಿದೆ’ ಎಂದು ಹೇಳಿದರು.

ಚಿಕ್ಕನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸೂಲಿವಾರ ಬಿ. ಬಸವರಾಜು, ‘ಸಚಿವ ಎಸ್.ಟಿ.ಸೋಮಶೇಖರ್ ಅವರು ವಿವಿಧ ರೀತಿಯಲ್ಲಿ ವೈಯಕ್ತಿಕವಾಗಿ ಎಲ್ಲ ರೀತಿಯ ಸಹಾಯ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿಯಿಂದಲೂ ನಾಗರಿಕರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಸದಸ್ಯರುಗಳೆಲ್ಲ ತೀರ್ಮಾನಿಸಿ ಈ ಕಾರ್ಯ ಹಮ್ಮಿಕೊಂಡಿದ್ದೇವೆ’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು