ಬೆಂಗಳೂರು: ಜೈನ ಮುನಿ ಕಾಮಕುಮಾರ ನಂದಿ ಅವರ ಕೊಲೆ ಪ್ರಕರಣವನ್ನು ಖಂಡಿಸಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದೆ.
‘ಬದುಕಿ, ಬದುಕಲು ಬಿಡಿ ಎಂಬ ತತ್ವದ ಮೂಲಕ ಜಗತ್ತಿಗೆ ಅಹಿಂಸೆ ಮತ್ತು ಶಾಂತಿ ಬೋಧಿಸಿದ ಜೈನ ಧರ್ಮವು ಪ್ರಾಣಿ ಹಾಗೂ ಪಕ್ಷಿಗಳಿಗೆ ಸೇರಿದಂತೆ ಸಕಲ ಜೀವರಾಶಿಗಳಿಗೆ ತೊಂದರೆ ಬಯಸದ ಆದರ್ಶ ಧರ್ಮ. ಇಂತಹ ಉತ್ಕೃಷ್ಟವಾದ ತತ್ವಗಳನ್ನು ಜೀವನ ಪರ್ಯಂತ ಮಹಾವೃತ್ತದಂತೆ ಪಾಲಿಸುವ ಜೈನ ಮುನಿಗಳಿಗೆ ಸಮಾಜದಲ್ಲಿ ವಿಶೇಷ ಗೌರವಿರುತ್ತದೆ. ಆದರೆ, ಬೆಳಗಾವಿ ಚಿಕ್ಕೋಡಿಯಲ್ಲಿ ಜೈನ ಮುನಿ ಅವರ ಹತ್ಯೆ ಪ್ರಕರಣವು ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಸಮಾಜಕ್ಕೂ ಕಳಂಕ ತಂದಿದೆ ಎಂದು ಮಹಾಸಭಾದ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದ್ದಾರೆ.
ರಾಜ್ಯದಲ್ಲಿ ಕಾನೂನಿನ ಭಯವಿಲ್ಲದೇ ಕೊಲೆ ಮಾಡುವ ದುಷ್ಕರ್ಮಿಗಳ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.