ಬೆಂಗಳೂರು: ಪ್ರೇಮಿಗಳ ದಿನದಂದು ಭಿಕ್ಷಾಟನೆಯಲ್ಲಿ ತೊಡಗಿದ್ದ 72 ಮಕ್ಕಳನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.

ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ನಗರದ ಏಳು ವಿಭಾಗಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಭಿಕ್ಷೆ ಬೇಡುತ್ತಿದ್ದ 44 ಗಂಡು ಮಕ್ಕಳು ಮತ್ತು 28 ಹೆಣ್ಣು ಮಕ್ಕಳನ್ನು ಪತ್ತೆ ಮಾಡಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ಮುಂದೆ ಮಕ್ಕಳನ್ನು ಹಾಜರು ಪಡಿಸಿ, ಮುಂದಿನ ಕ್ರಮಕ್ಕೆ ಸೂಚಿಸಲಾಗಿದೆ. ಮಕ್ಕಳ ಪೋಷಕರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.

‘ಪ್ರೇಮಿಗಳ ದಿನದಂದು ಉದ್ಯಾನ ಹಾಗೂ ಕೆಲ ಪ್ರದೇಶಗಳಲ್ಲಿ ಏಕಾಂಗಿಯಾಗಿ ಕುಳಿತಿರುವ ಪ್ರೇಮಿಗಳ ಮುಂದೆ ಮಕ್ಕಳನ್ನು ಬಿಟ್ಟು ಭಿಕ್ಷಾಟನೆ ಮಾಡಿಸುತ್ತಿದ್ದರು. ಕೆಲವರು ತಮ್ಮ ಸ್ವಂತ ಮಕ್ಕಳನ್ನೇ ಭಿಕ್ಷೆ ಬೇಡಲು ಬಳಸಿಕೊಂಡಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ಮಕ್ಕಳನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ಮತ್ತು ವ್ಯಾಪಾರ ಮಾಡಿಸುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.