ಶನಿವಾರ, ಡಿಸೆಂಬರ್ 5, 2020
21 °C

ಮಕ್ಕಳ ಸಾವು: ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಹಾವೇರಿಯಲ್ಲಿ ಶಾಲಾ ಆವರಣದಲ್ಲಿನ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ದಾರುಣ ಸಾವಿಗೀಡಾಗಿರುವ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು. ಶಾಲಾ ಆವರಣದಲ್ಲಿ ಯಾವುದೇ ರೀತಿಯ ನಿರ್ಮಾಣ ಕಾಮಗಾರಿ ನಡೆಯುವಾಗ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಚೈಲ್ಡ್‌ ರೈಟ್ಸ್ ಟ್ರಸ್ಟ್ ಒತ್ತಾಯಿಸಿದೆ.

‘ಈ ಪ್ರಕರಣ ಗಮನಿಸಿದರೆ, ಯಾವುದೇ ಮುನ್ನೆಚ್ಚರಿಕಾ ಕ್ರಮಗಳಿಲ್ಲದೆ ಕಾಮಗಾರಿ ಕೈಗೊಂಡಿರುವುದು ಕಂಡು ಬರುತ್ತದೆ. ಮಕ್ಕಳು ಶಾಲೆಯತ್ತ ಬರುವುದಿಲ್ಲ ಎಂದು ನಿರ್ಲಕ್ಷ್ಯ ತೋರಿದ್ದರ ಪರಿಣಾಮ ಈ ದುರ್ಘಟನೆ ನಡೆದಿದೆ. ಶಾಲಾ ಆವರಣದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸಬೇಕು’ ಎಂದು ಟ್ರಸ್ಟ್‌ನ ನಿರ್ದೇಶಕ ನಾಗಸಿಂಹ ಜಿ. ರಾವ್ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

‘ಏಳೆಂಟು ತಿಂಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ಇವುಗಳನ್ನು ತೆರೆಯುವ ಮೊದಲು  ಪ್ರತಿಶಾಲೆಯ್ಲಲೂ ‘ಮಕ್ಕಳ ರಕ್ಷಣಾ ನೀತಿ’ ಕಡ್ಡಾಯಗೊಳಿಸಬೇಕು. ಶಾಲೆಯ ಪ್ರತಿಯೊಬ್ಬ ಸಿಬ್ಬಂದಿಯೂ ರಕ್ಷಣಾ ನಿಯಮಗಳನ್ನು ಓದಿ ಅರ್ಥ ಮಾಡಿಕೊಂಡು ನಿಯಮಗಳಿಗೆ ಬದ್ಧರಾಗಿರುತ್ತೇವೆ ಎಂದು ಸಹಿ ಮಾಡಿದ್ದಾರೆ ಎಂಬುದನ್ನು ಶಿಕ್ಷಣಾಧಿಕಾರಿಗಳು ಖಚಿತ ಪಡಿಸಿಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.