ಮಂಗಳವಾರ, ನವೆಂಬರ್ 24, 2020
25 °C

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಗುಂಡಿಗೆ ಬಿದ್ದು ಮಗು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್‌ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು 2  ವರ್ಷದ ಮಗು ಮೃತಪಟ್ಟಿದೆ.

ಮಗುವಿನ ಹೆಸರು ವಿನೋದ್‌ಕುಮಾರ್ ಎಂದು ಗೊತ್ತಾಗಿದೆ. ತಂದೆ, ಕೊಪ್ಪಳ ತಾಲ್ಲೂಕಿನವರು. ಬಿಜಿಎಸ್ ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಭಂದಿ ಆಗಿ ಕೆಲಸ ಮಾಡುತ್ತಿದ್ದರು. ದಂಪತಿ, ನಿರ್ಮಾಣ ಹಂತದ ಕಟ್ಟಡದ ಬಳಿಯ ಶೆಡ್‌ನಲ್ಲಿ ವಾಸವಿದ್ದರು.

ರಮೇಶ ಎಂಬುವರಿಗೆ ಸೇರಿದ್ದ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗಿತ್ತು. ಶುಕ್ರವಾರ ಬೆಳಿಗ್ಗೆ ತಂದೆ ಕೆಲಸಕ್ಕೆ ಹೋಗಿದ್ದರು. ತಾಯಿ ಸ್ನಾನ ಮಾಡುತ್ತಿದ್ಧರು. ಅದೇ ವೇಳೆಯೇ ಮಗು ಆಟವಾಡುತ್ತ ಗುಂಡಿ ಬಳಿ ಹೋಗಿ ಬಿದ್ದಿತ್ತು ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು