ಬೆಂಗಳೂರು: ಇಂದಿನ ತಂತ್ರಜ್ಞಾನದ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾರೆ. ಇದರಿಂದ ಮಕ್ಕಳ ಮೇಲೆ ಆಗುತ್ತಿರುವ ದುಷ್ಪರಿಣಾಮಗಳನ್ನು ತಡೆಯಲು ಹಾಗೂ ಮಕ್ಕಳ ಸುರಕ್ಷತೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಎಸ್.ಕೋಸಂಬೆ ತಿಳಿಸಿದ್ದಾರೆ.

ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರುವಾರ ಭೇಟಿ ಮಾಡಿ ಈ ಬಗ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ‘ಆನ್ಲೈನ್ನಲ್ಲಿ ಲೈಂಗಿಕ ಶೋಷಣೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ವಿಷಯವನ್ನು ಕೇಂದ್ರೀಕರಿಸಿ, ಮಕ್ಕಳನ್ನು ಆನ್ಲೈನ್ ಅಥವಾ ಸಾಮಾಜಿಕ ಜಾಲತಾಣಗಳಿಂದ ದೂರ ಇಡಬೇಕು. ಸಮಾಜದಲ್ಲಿ ಮಕ್ಕಳೂ ಸರ್ವರೊಂದಿಗೆ ಬೆರೆಯಬೇಕು ಎಂಬುದು ಆಯೋಗದ ಕಳಕಳಿಯಾಗಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ನಮ್ಮ ಪತ್ರಕ್ಕೆ ಸ್ಪಂದಿಸಿದ್ದಾರೆ. ‘ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಚೈಲ್ಡ್ ಫಂಡ್ ಇಂಡಿಯಾ ಸಹಯೋಗದಲ್ಲಿ ರಾಜ್ಯದಲ್ಲಿ ಮಕ್ಕಳ ಆನ್ಲೈನ್ ಅಪಾಯಗಳ ಕುರಿತ ವರದಿಯನ್ನು ಅಧ್ಯಯನದ ಮೂಲಕ ವಿಸ್ತೃತವಾಗಿ ತಯಾರಿಸಿರುವುದು ಸ್ವಾಗತಾರ್ಹ. ಈ ವಿಚಾರನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಭರವಸೆ ನೀಡಿದ್ದಾರೆ’ ಎಂದು ಕೋಸಂಬೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.