ಭಾನುವಾರ, ನವೆಂಬರ್ 29, 2020
20 °C

ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇದೇ 14 ರಿಂದ 2021 ರ ಜನವರಿ 24 ರವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ’ ಮತ್ತು ‘ಮಕ್ಕಳ ಹಕ್ಕುಗಳ ಗ್ರಾಮಸಭೆ’ ನಡೆಸುವ ಸಂಬಂಧ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ 10 ವಾರಗಳ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆಯೂ ವಿವರವಾದ ಮಾಹಿತಿಯನ್ನೂ ನೀಡಿದೆ.

ಮಕ್ಕಳ ಸ್ನೇಹಿ ಗ್ರಾಮಪಂಚಾಯಿತಿ ಅಭಿಯಾನದಡಿ, ಮಕ್ಕಳ ಜನನ ನೋಂದಣಿ, ಜನನ ಪ್ರಮಾಣ ಪತ್ರ ವಿತರಣೆ, ಪೌಷ್ಟಿಕ ಆಹಾರ ಕುರಿತು ಮಾರ್ಗದರ್ಶನ ಹಾಗೂ ಜಾಗೃತಿ, ಚುಚ್ಚುಮದ್ದು, ಮಕ್ಕಳ ಕ್ರೀಡಾಕೂಟ, ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳು, ಮಕ್ಕಳಿಗೆ ಕಥೆ ಹೇಳುವ ಕಾರ್ಯಕ್ರಮ,  ಸ್ಥಳೀಯ ಸಾಂಪ್ರದಾಯಿಕ ಆಟೋಟ ಚಟುವಟಿಕೆಗಳು, ಶೈಕ್ಷಣಿಕ ಮತ್ತು ವೃತ್ತಿಪರ ಮಾರ್ಗದರ್ಶನದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದೂ ಸೂಚಿಸಿದೆ.

ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ನಡೆಸಲಾಗುವುದು. ಇದರಲ್ಲಿ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಭಾಗವಹಿಸಬೇಕು. ಇಬ್ಬರು ಮಕ್ಕಳು ಪ್ರತಿನಿಧಿಯಾಗಿ ಭಾಗವಹಿಸಬೇಕು.

ಈ ಸಭೆಯಲ್ಲಿ ಶಾಲಾ ದಾಖಲಾತಿ, ಶಾಲೆ ಬಿಟ್ಟ ಮಕ್ಕಳು, ಹೆಣ್ಣು ಮಕ್ಕಳ ಶಿಕ್ಷಣ, ಅಂಗವಿಕಲರ ಅಗತ್ಯತೆಗಳು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ವಸತಿ ನಿಲಯ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಿ ಕ್ರಮ ತಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.