ಬೆಂಗಳೂರು: ‘ಮೂರನೇ ಅಲೆಯ ವೇಳೆ ಮಕ್ಕಳು ಹೆಚ್ಚು ತೊಂದರೆಗೆ ಈಡಾಗಲಿದ್ದಾರೆ ಎಂದು ತಜ್ಞರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಪದ್ಮನಾಭನಗರದ ಪೆಟ್ರೋಲ್ ಪಂಪ್ ಬಳಿ ಮತ್ತು ಹೊಸಕೆರೆಹಳ್ಳಿ ಹತ್ತಿರ ಮಕ್ಕಳ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ’ ಎಂದು ಕಂದಾಯ ಸಚಿವ ಮತ್ತು ಕ್ಷೇತ್ರದ ಶಾಸಕ ಆರ್. ಅಶೋಕ್ ಹೇಳಿದರು.
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸಮುದಾಯಗಳಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ‘ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ನಾವು ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಬಿಕ್ಕಟ್ಟಿನ ಈ ಸಮಯದಲ್ಲಿ ಪರಸ್ಪರ ಸಹಕಾರ ನೀಡುವ ಅವಶ್ಯಕತೆಯಿದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.