ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳ ಸಂಚಾರ: ಹೈಕೋರ್ಟ್ ಬೇಸರ

Last Updated 6 ಮಾರ್ಚ್ 2020, 19:40 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳು ಸೇರಿದಂತೆ ಕಾರ್ಮಿಕರು ಹಾಗೂ ಸಾಮಾನ್ಯ ಪ್ರಯಾಣಿಕರನ್ನು ಕೊಂಡೊಯ್ಯಲಾಗುತ್ತಿದೆ’ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

‘ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳು ಸೇರಿದಂತೆ ಕಾರ್ಮಿಕರು ಹಾಗೂ ಸಾಮಾನ್ಯ ಪ್ರಯಾಣಿಕರನ್ನು ಕೊಂಡೊಯ್ಯುವುದನ್ನು ತಡೆಯಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ ಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಎಂಟಿಸಿ ಪರ ವಕೀಲರು, ‘ನಗರದ ಬಹುತೇಕ ಕಡೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಅನ್ಯ ಕಾರಣಗಳಿಗೆ ಶಾಲಾ ಮಕ್ಕಳು ಹಾಗೂ ಕಾರ್ಮಿಕರು ಸರಕು ವಾಹನಗಳಲ್ಲಿ ಪ್ರಯಾಣ ಮಾಡಲು ಬಯಸುತ್ತಾರೆ’ ಎಂದರು.

‘ಎಲ್ಲಿಯಾದರೂ ಬಸ್ ವ್ಯವಸ್ಥೆ ಇಲ್ಲ ಎಂದರೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಈ ಕುರಿತು ಅರ್ಜಿದಾರರ ಬಳಿ ಮಾಹಿತಿ ಅಥವಾ ಸಲಹೆಗಳ ಇದ್ದರೆ ಅದನ್ನು ನಮಗೆ ನೀಡಲಿ’ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಕಿಡಿಕಾರಿದ ನ್ಯಾಯಪೀಠ, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ, ಕೆಎಸ್‌ಆರ್‌ಟಿಸಿ, ಎನ್‌ಇಕೆಆರ್‌ಟಿಸಿ, ಎನ್‌ಡಬ್ಲೂಕೆಆರ್‌ ಟಿಸಿ ಮತ್ತು ಬಿಎಂಟಿಸಿಗೆ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT