ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟಿಕೆ ಮಾರಾಟಕ್ಕೆ ಮಕ್ಕಳ ಬಳಕೆ: ಸರ್ಕಾರಕ್ಕೆ ನೋಟಿಸ್

Last Updated 23 ಸೆಪ್ಟೆಂಬರ್ 2020, 3:28 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಟ್ರಾಫಿಕ್ ಜಂಕ್ಷನ್‌ಗಳಲ್ಲಿ ಮಕ್ಕಳಿಂದ ಹೂವು, ಆಟಿಕೆ ಸಾಮಾಗ್ರಿಗಳನ್ನು ಮಾರಾಟ ಮಾಡಿಸುವುದನ್ನು ತಡೆಯಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ನೀಡಿದೆ.

ಲೆಟ್ಜ್‌ಕಿಟ್‌ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠವು ಬಿಬಿಎಂಪಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಇತರ ಇಲಾಖೆಗಳಿಗೆ ನೋಟಿಸ್ ನೀಡಿದೆ.

2020ರ ಮೇ 19ರ ನಂತರ ವಾಹನ ಸಂಚಾರ ಸೇರಿ ಎಲ್ಲಾ ವಹಿವಾಟು ಆರಂಭವಾಗಿದೆ. ಜಂಕ್ಷನ್‌ಗಳಲ್ಲಿ ಆಟಿಕೆ ಮಾರಾಟ ಮಾಡುವ ಮತ್ತು ಭಿಕ್ಷೆ ಬೇಡುವ ಮಕ್ಕಳು ಮತ್ತೆ ಕಾಣಿಸುತ್ತಿದ್ದಾರೆ. ಇದನ್ನು ತಡೆಯಬೇಕು ಮತ್ತು ಮಕ್ಕಳಿಗೆ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT