ಶನಿವಾರ, ಫೆಬ್ರವರಿ 29, 2020
19 °C
ನಿಷೇಧಿತ ಪ್ಲಾಸ್ಟಿಕ್‌, ಫ್ಲೆಕ್ಸ್‌ ಬಳಕೆ

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ₹50 ಸಾವಿರ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಕ್ರಿಕೆಟ್‌ ಪಂದ್ಯದ ವೇಳೆ ನಿಷೇಧಿತ ಪ್ಲಾಸ್ಟಿಕ್‌ ಕಪ್‌ ಹಾಗೂ ಫ್ಲೆಕ್ಸ್‌ ಬ್ಯಾನರ್‌ ಬಳಸಿದ ಕಾರಣಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಿಬಿಎಂಪಿ ₹50 ಸಾವಿರ ದಂಡ ವಿಧಿಸಿದೆ.

ಬಿಬಿಎಂಪಿಯ ಪೂರ್ವ ವಲಯದ ಉಪ ಆರೋಗ್ಯಾಧಿಕಾರಿ ಅವರು ದಂಡದ ನೋಟಿಸ್‌ ಅನ್ನು ಕ್ರೀಡಾಂಗಣದ ವ್ಯವಸ್ಥಾಪಕರಿಗೆ ಸೋಮವಾರ ತಲುಪಿಸಿದ್ದಾರೆ. ಈ ನೋಟಿಸ್‌ನ ಛಾಯಾಚಿತ್ರವನ್ನು ಪಾಲಿಕೆ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಭಾನುವಾರ ನಡೆದ ಕ್ರಿಕೆಟ್‌ ಪಂದ್ಯದ ವೇಳೆ ಉಪ ಆರೋಗ್ಯಾಧಿಕಾರಿ ತಪಾಸಣೆ ಮಾಡಿದಾಗ ಕ್ರೀಡಾಂಗಣದಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಕಪ್‌ ಹಾಗೂ ಫ್ಲೆಕ್ಸ್‌ ಬ್ಯಾನರ್‌ ಬಳಸಿದ್ದು ಕಂಡುಬಂದಿತ್ತು.

ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಕಪ್‌ ಹಾಗೂ ಫ್ಲೆಕ್ಸ್‌ ಬ್ಯಾನರ್‌ಗಳನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಆರೋಗ್ಯ ವಿಭಾಗದಿಂದ ಹಲವಾರು ಬಾರಿ ತಿಳಿವಳಿಕೆ ನಿಡಲಾಗಿದೆ. ಆದರೂ ಕ್ರೀಡಾಂಗಣದ ಮಳಿಗೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಸಲಾಗಿತ್ತು. ಹಾಗಾಗಿ ₹50 ಸಾವಿರ ದಂಡ ವಿಧಿಸಲಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಉಪ ಆರೋಗ್ಯಾಧಿಕಾರಿ ನೋಟಿಸ್‌ ನೀಡಿದ್ದಾರೆ. ದಂಡ ಕಟ್ಟುವುದಕ್ಕೆ ಏಳು ದಿನಗಳ ಕಾಲಾವಕಾಶ ನೀಡುತ್ತೇವೆ. ಅಷ್ಟರಲ್ಲಿ ದಂಡ ಕಟ್ಟದಿದ್ದರೆ ದುಪ್ಪಟ್ಟು ದಂಡ ವಿಧಿಸುತ್ತೇವೆ. ಆಗಲೂ ಪಾವತಿಸದಿದ್ದರೆ ಆಸ್ತಿ ತೆರಿಗೆ ಜೊತೆ ದಂಡವನ್ನೂ ಸೇರಿಸಿ ವಸೂಲಿ ಮಾಡುತ್ತೇವೆ’ ಎಂದು ಪೂರ್ವ ವಲಯದ ಜಂಟಿ ಆಯುಕ್ತರಾದ ಪಲ್ಲವಿ ಅವರು ‘ಪ್ರಜಾವಾಣಿಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು