ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿಗೆ ಆಗ್ರಹಿಸಿ ‘ಚಿಪ್ಪು ಚಳವಳಿ’

Last Updated 10 ಮಾರ್ಚ್ 2023, 20:22 IST
ಅಕ್ಷರ ಗಾತ್ರ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ‘ಎ’ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ, ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಜಮಖಂಡಿ ಹಾಗೂ ಮಹಾಲಿಂಗಪುರ ಪಂಚಮಸಾಲಿ ಸಮುದಾಯದವರು ಚಿಪ್ಪು ಚಳವಳಿ ನಡೆಸಿದರು.

ಕೈಯಲ್ಲಿ ತೆಂಗಿನ ಚಿಪ್ಪು ಇಟ್ಟುಕೊಂಡು ಆಕ್ರೋಶ ಹೊರಹಾಕಿದರು.

ಸ್ವಾಮೀಜಿ ನೇತೃತ್ವದಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದ ಪ್ರತಿಭಟನಕಾರರು, ಶನಿವಾರ ಬೆಂಗಳೂರಿಗೆ ಬಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

‘ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯವನ್ನು ಮತಕ್ಕಾಗಿ ಮಾತ್ರ ಬಳಸಿಕೊಳ್ಳುತ್ತಿದೆ. ಸಮುದಾಯದ ಪರವಾಗಿ ಕೆಲಸ ಮಾಡುತ್ತಿಲ್ಲ’ ಎಂದು ಆಪಾದಿಸಿದರು.‌

ಮುಖಂಡರಾದ ದೀಪಕ್ ಜುಂಜರವಾಡ, ಡಾ.ಬಿ.ಎಸ್.ಪಾಟೀಲ್, ಪುಟ್ಟರಾಜ್ ಹಳ್ಳದ, ಶಿವ ಕುಮಾರ್ ಮೇಟಿ, ಮಲ್ಲಿಕಾರ್ಜುನ ಹಿರೇಕೊಪ್ಪ, ಕಾಂತೇಶ್ ತುಂಬಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT