ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರಿಮಾರಿ ಕೆರೆ ಕಟ್ಟಿದ ಕಾಮೇಗೌಡರಿಗೆ 'ಬಸವ ಶ್ರೀ' ಪ್ರಶಸ್ತಿ

Last Updated 9 ಏಪ್ರಿಲ್ 2018, 9:24 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುರುಘಾಮಠದ 2017 ನೇ ಸಾಲಿನ ಬಸವ ಶ್ರೀ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಪ್ರಕೃತಿ ಸಂರಕ್ಷಕ ಕಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.

ಏಪ್ರಿಲ್‌ 15ರಂದು ಮುರುಘಾಮಠದ ಅಲ್ಲಮಪ್ರಭು ಸಭಾಂಗಣದಲ್ಲಿ ವಿಶಿಷ್ಟ ರೀತಿಯಲ್ಲಿ ಆಯೋಜಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ  ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಿವಮೂರ್ತಿ ಮುರುಘಾಶರಣರು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು‌.

ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ಮಳವಳ್ಳಿ ತಾಲ್ಲೂಕಿನ ಕುಂದನಿ ಪರ್ವತದ ಮೇಲೆ ಕೆರೆ, ಕಟ್ಟೆ ಕಟ್ಟಿರುವ ಕಾಮೇಗೌಡ ಅವರು ಪ್ರಕೃತಿ ಸಂರಕ್ಷಕ ಎಂದೇ ಪ್ರಖ್ಯಾತರಾಗಿದ್ದಾರೆ. ಬಿಸಿಲಿನ ಬೇಗೆಯಿಂದ ತತ್ತರಿಸುವ ಜೀವರಾಶಿಗಳಿಗೆ ಜೀವಜಲ ನೀಡುವ ಮಹಾಂತರಾಗಿದ್ದಾರೆ. ಬಸವಣ್ಣನವರ ಕಾಯಕ ತತ್ವ ಪಾಲನೆಯಲ್ಲಿ ತೊಡಗಿರುವ ಕಾಮೇಗೌಡರನ್ನು ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಶರಣರು ತಿಳಿಸಿದರು.

ಇದನ್ನೂ ಓದಿ....
ಕುರಿ ಮಾರಿ ಕೆರೆ ಕಟ್ಟಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT