ಮಂಗಳವಾರ, ನವೆಂಬರ್ 24, 2020
27 °C

ಚರ್ಚ್‍ಸ್ಟ್ರೀಟ್‍: ವಾರಾಂತ್ಯದಲ್ಲಿ ವಾಹನ ಸಂಚಾರ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಚರ್ಚ್‍ಸ್ಟ್ರೀಟ್‍ನಲ್ಲಿ ಫೆಬ್ರುವರಿವರೆಗೆ ಎಲ್ಲ ವಾರಾಂತ್ಯಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶಿಸಿದ್ದಾರೆ.

'ವಾಯುಮಾಲಿನ್ಯ ತಡೆಯುವುದು ಮತ್ತು ಸೈಕಲ್ ಸವಾರರು, ಪಾದಚಾರಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರಾಯೋಗಿಕವಾಗಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ'.

'ಇಲ್ಲಿ ವಾಯು ಮಾಲಿನ್ಯ ಕಡಿಮೆಯಾಗಿ ಗಾಳಿಯ ಗುಣಮಟ್ಟ ಹೆಚ್ಚಿದರೆ, ಉಳಿದ ಕಡೆಗಳಲ್ಲೂ ಈ ನಿಯಮ ಜಾರಿಗೊಳಿಸಲಾಗುವುದು. ಬ್ಯಾರಿಕೇಡ್ ಅಳವಡಿಸಿ, ಚರ್ಚ್‍ಸ್ಟ್ರೀಟ್ ನಿವಾಸಿಗಳ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಈ ನಿಯಮ 2020ರ ಫೆಬ್ರುವರಿ ಅಂತ್ಯದವರೆಗೆ ಮಾತ್ರ' ಎಂದು ತಿಳಿಸಿದ್ದಾರೆ.

'ಕ್ಲೀನ್ ಏರ್  ಸ್ಟ್ರೀಟ್' ಯೋಜನೆ ಅನುಷ್ಠಾನಗೊಳಿಸಲು ಚರ್ಚ್ ಸ್ಟ್ರೀಟ್ ಅನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚು. ಪ್ರಾಯೋಗಿಕವಾಗಿ ಈ ರಸ್ತೆಯನ್ನು 'ಫ್ರೀ ಏರ್' ಅಥವಾ 'ಓಪನ್ ಏರ್' ಮಾದರಿಗೆ ಪರಿವರ್ತಿಸಲಾಗುತ್ತಿದೆ. ಅದಕ್ಕಾಗಿ ಇಲ್ಲಿ ವಾರಾಂತ್ಯದಲ್ಲಿ ಮಾತ್ರ ವಾಹನ ಸಂಚಾರ ನಿಷೇಧಿಸಲಾಗಿದೆ. ಜನರ ಸ್ಪಂದನೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಜಂಟಿ ಕಮಿಷನರ್ (ಸಂಚಾರ) ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು