ಭಾನುವಾರ, ಏಪ್ರಿಲ್ 5, 2020
19 °C

ಆನ್‌ಲೈನ್‌ ಮೂಲಕ ವಂಚನೆ: ಸಿಐಡಿ ತನಿಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊಡಗಿನಲ್ಲಿ ‘ಕ್ಯಾಪಿಟಲ್‌ ರಿಲಯನ್ಸ್‌ ಡಾಟ್‌ ಇನ್‌’ ಎಂಬ ವೆಬ್‌ಸೈಟ್‌ ತೆರೆದು ಹಣ ದ್ವಿಗುಣಗೊಳಿಸುವುದಾಗಿ ಹೇಳಿ ಸಾರ್ವಜನಿಕರನ್ನು ವಂಚಿಸಿದ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್‌ ಈ ವಿಷಯ ಪ್ರಸ್ತಾಪಿಸಿದರು. ಕೊಡಗಿನಲ್ಲಿ ಈ ನಕಲಿ ಕಂಪನಿಯು ಸುಮಾರು 3,000 ಜನರನ್ನು ವಂಚಿಸಿದೆ. ಈ ಬಗ್ಗೆ ಸಿಬಿಐ ತನಿಖೆಯೇ ಆಗಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರ ನೀಡಿದ ಸಚಿವರು ಸಿಐಡಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು