ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಭಾರತಿನಗರ ಠಾಣೆ ಪೊಲೀಸರು ಸಂಬಂಧಿಸಿದ ದಾಖಲೆಗಳು ಹಾಗೂ ಕಡತಗಳನ್ನು ತನಿಖಾಧಿಕಾರಿಗೆ ವರ್ಗಾಯಿಸಿದ್ದರು.

ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್.ಪಿ. ವೆಂಕಟೇಶ್, ಡಿವೈಎಸ್ಪಿ ಉಮೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹಿಂದಿನ ತನಿಖಾಧಿಕಾರಿ ಎಸಿಪಿ ಪ್ರಕಾಶ್ ರಾಥೋಡ್ ಸ್ಥಳದಲ್ಲಿ ಹಾಜರಿದ್ದು, ಘಟನೆ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಭಾರತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 15ರಂದು ರೌಡಿ ಶೀಟರ್ ಶಿವಪ್ರಕಾಶ್ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು. ಪೊಲೀಸರು 16 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಿಜೆಪಿ ಶಾಸಕ ಬೈರತಿ ಬಸವರಾಜ 5ನೇ ಆರೋಪಿಯಾಗಿದ್ದು, ಎರಡು ಬಾರಿ ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ.

ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಶೀಘ್ರದಲ್ಲೇ ಸಿಐಡಿ ಅಧಿಕಾರಿಗಳು ಬಾಡಿ ವಾರಂಟ್ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಬೈರತಿ ಬಸವರಾಜ ಅವರಿಗೆ ಶೀಘ್ರದಲ್ಲೇ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.