ಚಿತ್ರದುರ್ಗ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಹಾಗೂ ಪರಿಶಿಷ್ಟ ಜಾತಿ, ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಶಿವಮೂರ್ತಿ ಶರಣರ ವಿರುದ್ಧ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಐಡಿ ಅಧಿ
ಕಾರಿಗಳ ತಂಡ ಬುಧವಾರ ಮುರುಘಾ ಮಠಕ್ಕೆ ಭೇಟಿ ನೀಡಿ ಪರಿಶೀಲಿಸಿತು.
ಬೆಂಗಳೂರಿನ ಸಿಐಡಿ ಡಿವೈಎಸ್‌ಪಿ ನಂದಕುಮಾರ್ ನೇತೃತ್ವದ ತಂಡ ಮಧ್ಯಾಹ್ನ ಮಠಕ್ಕೆ ಭೇಟಿ ನೀಡಿತ್ತು. ಮಠದ ಸಿಬ್ಬಂದಿಯಿಂದ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಸಿರುವ ಪೊಲೀಸರ ಬಳಿ ಮಾಹಿತಿ ಪಡೆಯಿತು ಎಂದು ಮೂಲಗಳು ತಿಳಿಸಿವೆ.
ಮುರುಘಾ ಮಠದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ಮುಖಂಡ ಮಾರಸಂದ್ರ ಮುನಿಯಪ್ಪ ದೂರು ಸಲ್ಲಿಸಿದ್ದರು. ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ಸಿಐಡಿ ತಂಡ ಮಠಕ್ಕೆ ಭೇಟಿ ನೀಡಿತ್ತು.
ಶಿವಮೂರ್ತಿ ಶರಣರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದ್ದು, ವಿಚಾರಣೆಯ ಹಂತದಲ್ಲಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.