ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವೃತ್ತ ರೈಲು ಸಂಪರ್ಕ ಜಾಲ: ರಾಜ್ಯ ಬೆಂಬಲ ನೀಡಿದರೆ ಮುಂದಿನ ಹೆಜ್ಜೆ– ವೈಷ್ಣವ್‌

Published 6 ಡಿಸೆಂಬರ್ 2023, 16:17 IST
Last Updated 6 ಡಿಸೆಂಬರ್ 2023, 16:17 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರು ಸುತ್ತಮುತ್ತಲಿನ ಪ್ರಮುಖ ಪಟ್ಟಣಗಳನ್ನು ಸಂಪರ್ಕಿಸುವ ದೇಶದ ಅತಿದೊಡ್ಡ ವೃತ್ತ ರೈಲು ಸಂಪರ್ಕಜಾಲವನ್ನು (ಸರ್ಕ್ಯುಲರ್‌ ರೈಲ್ವೆ) ನಿರ್ಮಿಸುವ ಯೋಜನೆ ಇದೆ. ಈ ಯೋಜನೆಯ ಮುಂದಿನ ಹಂತಗಳು ವಿಸ್ತೃತ ಯೋಜನಾ ವರದಿಯ ಫಲಿತಾಂಶ ಮತ್ತು ಕರ್ನಾಟಕ ಸರ್ಕಾರದ ಬೆಂಬಲವನ್ನು ಅವಲಂಬಿಸಿರುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

ಲೋಕಸಭೆಯಲ್ಲಿ ಸದಸ್ಯರಾದ ಸುಮಲತಾ ಅಂಬರೀಷ್‌ ಹಾಗೂ ಡಿ.ಕೆ. ಸುರೇಶ್‌ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಸಚಿವರು, ‘ನಿಡವಂದ–ದೊಡ್ಡಬಳ್ಳಾಪುರ–ದೇವನಹಳ್ಳಿ–ಮಾಲೂರು–ಹೀಲಲಿಗೆ–ಸೋಲೂರು–ನಿಡವಂದ ನಿಲ್ದಾಣಗಳನ್ನು ಸಂಪರ್ಕಿಸುವ ವೃತ್ತರೈಲು ಸಂಪರ್ಕ ಜಾಲ 287 ಕಿ.ಮೀ. ಇರಲಿದೆ. ಡಿಪಿಆರ್ ಸಿದ್ಧಪಡಿಸಲು ₹7.19 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT