ಗುರುವಾರ , ಜೂನ್ 4, 2020
27 °C

ಸಿಐಟಿಯು ವತಿಯಿಂದ ಆಹಾರ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ರಾಜ್ಯ ಸಮಿತಿ ಹಾಗೂ ಬೆಂಗಳೂರು ವಿಮಾ ನೌಕರರ ಸಂಘದ ಸಹಯೋಗದಲ್ಲಿ ಅಸಂಘಟಿತ ಕಾರ್ಮಿಕರಿಗೆ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ ಆಹಾರದ ಕಿಟ್ ವಿತರಿಸಲಾಯಿತು.

ಮಾರುಕಟ್ಟೆ ಪ್ರಾಂಗಣದಲ್ಲಿ ನಿತ್ಯ ದುಡಿಯುತ್ತಿರುವ ಮಹಿಳೆಯರು ಹಾಗೂ ಪುರುಷ ಹಮಾಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಚಾಲನೆ ನೀಡಿದರು.

ಬೀದಿಬದಿ ವ್ಯಾಪಾರಿಗಳು, ಕಟ್ಟಡ ಕಾರ್ಮಿಕರು, ಆಟೊ ಚಾಲಕರು ಹಾಗೂ ದಿನಗೂಲಿ ಕಾರ್ಮಿಕರಿಗೂ ಸಂಘಟನೆ ವತಿಯಿಂದ ಆಹಾರದ ಕಿಟ್ ವಿತರಿಸಲಾಗುತ್ತಿದೆ.

ಸಂಘಟನೆಯ ರಾಜ್ಯ ಉಪಾಧ್ಯಕ್ಷ ಎಚ್.ಎನ್.ಗೋಪಾಲಗೌಡ, ಕಾರ್ಯದರ್ಶಿಗಳಾದ ಕೆ.ಎನ್.ಉಮೇಶ್ ಹಾಗೂ ಕೆ.ಮಹಾಂತೇಶ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು