ಬೆಂಗಳೂರು: ಬೀದಿ ನಾಯಿಗಳಿಗೆ ಆಹಾರ ನೀಡಲು ನಿರ್ದಿಷ್ಟ ಸ್ಥಳಗಳನ್ನು ಗುರುತಿಸಿರುವ ಬೆಂಗಳೂರು ಉತ್ತರ ನಗರ ಪಾಲಿಕೆ, ಅಲ್ಲಿ ಸೂಚನಾ ಫಲಕ ಅಳವಡಿಸಿದೆ.

ಬೀದಿ ನಾಯಿಗಳ ಮಾನವೀಯ ನಿರ್ವಹಣೆ, ಸಾರ್ವಜನಿಕ ಆರೋಗ್ಯ ರಕ್ಷಣೆ ಹಾಗೂ ಪರಿಸರ ಸ್ವಚ್ಛತೆಯನ್ನು ಸಮನ್ವಯಗೊಳಿಸುವ ಉದ್ದೇಶದಿಂದ ಪಾಲಿಕೆಯ ಪ್ರಾಣಿ ಕಲ್ಯಾಣ ವಿಭಾಗವು 70 ನಿರ್ದಿಷ್ಟ ಸ್ಥಳಗಳನ್ನು ಗುರುತಿಸಿದೆ. ಇವುಗಳನ್ನು, ಬೀದಿ ನಾಯಿಗಳಿಗೆ ಆಹಾರ ನೀಡುವ ಅಧಿಕೃತ ಜಾಗ ಎಂದು ಘೋಷಿಸಿ, ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ಆಯುಕ್ತ ಪೊಮ್ಮಲ ಸುನೀಲ್ಕುಮಾರ್ ತಿಳಿಸಿದರು.

ಸುಪ್ರೀಂ ಕೋರ್ಟ್ ಮಾರ್ಗಸೂಚಿ, ಪ್ರಾಣಿ ಕ್ರೂರತೆ ನಿವಾರಣೆ ಕಾಯ್ದೆ–1960 ಹಾಗೂ ಪ್ರಾಣಿ ಜನನ ನಿಯಂತ್ರಣ (ಎಬಿಸಿ) ನಿಯಮಾವಳಿಗಳ ಅನ್ವಯ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥಿತ ಹಾಗೂ ನಿಯಂತ್ರಿತ ರೀತಿಯಲ್ಲಿ ಆಹಾರ ನೀಡುವ ವ್ಯವಸ್ಥೆಯನ್ನು ರೂಪಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಆಹಾರವನ್ನು ಗುರುತಿಸಿದ ಸ್ಥಳಗಳಲ್ಲೇ ನೀಡಬೇಕು. ಮುಖ್ಯ ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಆಹಾರ ನೀಡಬಾರದು. ಆಹಾರ ನೀಡಿದ ನಂತರ ಸ್ಥಳವನ್ನು ಸ್ವಚ್ಛವಾಗಿಡುವುದು ಆಹಾರ ನೀಡುವವರ ಜವಾಬ್ದಾರಿಯಾಗಿದೆ. ನಾಯಿಗಳಿಗೆ ಹಾನಿ ಮಾಡುವುದು ಅಥವಾ ಕಿರುಕುಳ ನೀಡುವುದು ಕಾನೂನುಬಾಹಿರವಾಗಿದೆ. ಸಾರ್ವಜನಿಕ ಸುರಕ್ಷತೆ ಕಾಪಾಡುವಂತೆ ಶಿಸ್ತಿನಿಂದ ಆಹಾರ ನೀಡಬೇಕು ಎಂದು ಸೂಚಿಸಲಾಗಿದೆ. ದೂರುಗಳಿದ್ದರೆ ಸಹಾಯವಾಣಿ: 1533 ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

‘ಅಲ್-ಫಾಜ್’ ಹೋಟೆಲ್ಗೆ ದಂಡ

ಬೆಂಗಳೂರು: ಹೊಸ ಗುರಪ್ಪನಪಾಳ್ಯದಲ್ಲಿರುವ ‘ಅಲ್-ಫಾಜ್’ ಹೋಟೆಲ್ ಮೇಲೆ ದಾಳಿ ನಡೆಸಿದ ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ಹೋಟೆಲ್ ಆವರಣದಲ್ಲಿ ಶುಚಿತ್ವ ಕಾಪಾಡದೆ ಇರುವುದು ಮತ್ತು ನಿಯಮಗಳ ಉಲ್ಲಂಘನೆಗಾಗಿ ₹75 ಸಾವಿರ ದಂಡ ವಿಧಿಸಿದ್ದಾರೆ.

ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಪಾಲಿಕೆಯ ಘನತ್ಯಾಜ್ಯ ನಿರ್ವಹಣಾ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೋಟೆಲ್ ಆವರಣದಲ್ಲಿ ಸರಿಯಾದ ನೈರ್ಮಲ್ಯ ಕಾಪಾಡದಿರುವುದು. ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸದೆ ನಿಯಮ ಉಲ್ಲಂಘಿಸಿರುವುದು. ಸರ್ಕಾರದಿಂದ ನಿಷೇಧಿಸಲಾಗಿರುವ ಏಕಬಳಕೆಯ ಪ್ಲಾಸ್ಟಿಕ್ ಬಳಸಿರುವುದು ದಾಳಿಯ ಸಂದರ್ಭದಲ್ಲಿ ಕಂಡು ಬಂದಿತು. ನಿಯಮಗಳನ್ನು ಪಾಲಿಸದಿದ್ದರೆ ಮುಂಬರುವ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆಯ ಅಧಿಕಾರಿಗಳು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.