ಬೆಂಗಳೂರು: ಸಿದ್ಧ ಉಡುಪುಗಳಲ್ಲಿ ಬಚ್ಚಿಟ್ಟು ಡ್ರಗ್ಸ್ ಸಾಗಣೆ

ಬೆಂಗಳೂರು: ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಹೆಸರಿನ ಸಿದ್ಧ ಉಡುಪುಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ ಡ್ರಗ್ಸ್ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
‘ಆಸ್ಟ್ರೇಲಿಯಾಗೆ ಡ್ರಗ್ಸ್ ಸಾಗಿಸುತ್ತಿರುವ ಮಾಹಿತಿ ಆಧರಿಸಿ ತಪಾಸಣೆ ನಡೆಸಿದಾಗ ₹ 89.92 ಲಕ್ಷ ಮೌಲ್ಯದ 4 ಕೆ.ಜಿ 496 ಗ್ರಾಂ ಎಫೆಡ್ರೈನ್ ಡ್ರಗ್ಸ್ ಪತ್ತೆಯಾಯಿತು. ಬಾಕ್ಸ್ ಮೇಲಿನ ವಿಳಾಸ ಆಧರಿಸಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ಆತ ಯಾರಿಗೆ ಡ್ರಗ್ಸ್ ಕಳುಹಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿಯಬೇಕು’ ಎಂದೂ ಕಸ್ಟಮ್ಸ್ ಮೂಲಗಳು ಹೇಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.