ಮಂಗಳವಾರ, ಅಕ್ಟೋಬರ್ 27, 2020
28 °C

ಮೂವರ ಬಂಧನ: ₹ 22.95 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸುಲಿಗೆ, ಮನೆಯಲ್ಲಿ ಕಳ್ಳತನ ಹಾಗೂ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ಮೂವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

‘ಜೆ.ಜೆ. ನಗರದ ಅಫ್ಜಲ್ ಪಾಷಾ (24), ಅಫ್ರಿದ್ ಖಾನ್ (23) ಹಾಗೂ ಆಂಧ್ರಪ್ರದೇಶದ ಪ್ರವೀಣ್ ಕುಮಾರ್ (28) ಬಂಧಿತರು. ಅವರಿಂದ ₹ 22.95 ಲಕ್ಷ ಮೌಲ್ಯದ ಚಿನ್ನಾಭರಣ, 43 ಮೊಬೈಲ್, 3 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೆಂಪೇಗೌಡ ರಸ್ತೆಯಲ್ಲಿ ಇದೇ 13ರಂದು ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮೊಬೈಲ್‌ ಸುಲಿಗೆ ಮಾಡಲಾಗಿತ್ತು. ಈ ಕುರಿತ ದೂರಿನನ್ವಯ ಅಫ್ಜಲ್‌ ಪಾಷಾನನ್ನು ಬಂಧಿಸಲಾಯಿತು. ಆತ ನೀಡಿದ ಮಾಹಿತಿಯಂತೆ ಉಳಿದಿಬ್ಬರು ಸಿಕ್ಕಿಬಿದ್ದರು’ ಎಂದೂ ತಿಳಿಸಿದರು.

41 ಮೊಬೈಲ್‌ಗಳಿಗೆ ವಾರಸುದಾರರಿಲ್ಲ: ‘ಆರೋಪಿಗಳಿಂದ ಜಪ್ತಿ ಮಾಡಲಾದ ಮೊಬೈಲ್‌ಗಳ ಪೈಕಿ 41 ಮೊಬೈಲ್‌ಗಳ ವಾರಸುದಾರರ ಮಾಹಿತಿ ಸಿಕ್ಕಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು