ಕೆ.ಆರ್.ಪುರ: ‘ದಲಿತ ಚಳುವಳಿಯ ಮುಂಚೂಣಿ ನಾಯಕ ದಿ.ಪ್ರೊ.ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ನೆನಪಿನಲ್ಲಿ ಜೂನ್ 9ರಂದು ‘ನಾಗರಿಕ ಹಕ್ಕುಗಳ ರಕ್ಷಣಾ ದಿನ’ವಾಗಿ ಆಚರಿಸಲಾಗುತ್ತದೆ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಬೆಂಗಳೂರು ವಿಭಾಗೀಯ ಸಂಚಾಲಕ ಮಣಿಪಾಲ್ ರಾಜಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅವರು, ‘ಅಂದು ಬೆಳಿಗ್ಗೆ ಮೈಸೂರು ಬ್ಯಾಂಕ್ ಸಮೀಪದ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅಧ್ಯಕ್ಷತೆಯಲ್ಲಿ ನಾಗರಿಕರ ಹಕ್ಕುಗಳ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಭಾಗೀಯ ಸಂಘಟನಾ ಸಂಚಾಲಕರಾದ ಮುನಿನಂಜಪ್ಪ, ಕೈಕೊಂಡ್ರಹಳ್ಳಿ ನಾರಾಯಣಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಗೋವಿಂದ್ ಕುಮಾರ್, ಪೂರ್ವ ತಾಲ್ಲೂಕು ಅಧ್ಯಕ್ಷ ಆದೂರು ಮಂಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.