ಬೆಂಗಳೂರು: ‘ಚಿತ್ರಕಲಾ ಪರಿಷತ್ನಲ್ಲಿ (ಸಿಕೆಪಿ) 2007–2009ರ ಅವಧಿಯಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಕುರಿತಂತೆತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ನೋಂದಣಾಧಿಕಾರಿ ಸಲ್ಲಿಸಿರುವ ವರದಿಯನ್ನು ಮೂರು ತಿಂಗಳ ಒಳಗಾಗಿ ಜಾರಿಗೊಳಿಸಿ’ ಎಂದು ಹೈಕೋರ್ಟ್,ಸಹಕಾರ ಸಂಘಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಿದೆ.

ಈ ಕುರಿತಂತೆ ಡಾ.ಟಿ.ಎನ್.ಲಕ್ಷ್ಮೀಪತಿ ಬಾಬು ಹಾಗೂ ಟಿ.ಚಂದ್ರಶೇಖರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪಿ.ಪ್ರಸನ್ನಕುಮಾರ್, ‘ಸಿಕೆಪಿ ಅಧ್ಯಕ್ಷ ಟಿ.ಪ್ರಭಾಕರ ಹಾಗೂ ಕಾರ್ಯದರ್ಶಿ ಎಂ.ಜೆ.ಕಮಲಾಕ್ಷಿ 2007ರಿಂದ 2009ರ ತಮ್ಮ ಅಧಿಕಾರವಧಿಯಲ್ಲಿ ವ್ಯಾಪಕ ಆರ್ಥಿಕ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಎಂದುಕಾರ್ಯಕಾರಿ ಸಮಿತಿ ಸದಸ್ಯರೂ ಆದ ಅಂತರರಾಷ್ಟ್ರೀಯ ಖ್ಯಾತಿಯ ಕಲಾವಿದ ಬಾಬು ಈಶ್ವರ ಪ್ರಸಾದ್ ಮತ್ತು ಎಸ್.ಗೋಪಿನಾಥ್ ಸಹಕಾರ ಸಂಘಗಳ ನೋಂದಾಣಾಧಿಕಾರಿಗೆ ದೂರು ನೀಡಿದ್ದರು’ ಎಂಬುದನ್ನು ನ್ಯಾಯಪೀಠಕ್ಕೆ ವಿವರಿಸಿದರು.

‘ದೂರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಜಿಲ್ಲಾ ನೋಂದಣಾಧಿಕಾರಿ 2015ರ ಅಕ್ಟೋಬರ್ 21ರಂದು ಸರ್ಕಾರಕ್ಕೆ ವರದಿ ನೀಡಿ ಒಟ್ಟು ₹ 60,62,648 ಮೊತ್ತದ ಆರ್ಥಿಕ ಅವ್ಯವಹಾರ ನಡೆದಿದೆ ಎಂಬುದನ್ನು ಪತ್ತೆ ಹಚ್ಚಿರುತ್ತಾರೆ. ಆದರೆ, ಸರ್ಕಾರ ರಾಜಕೀಯ ಒತ್ತಡಗಳಿಗೆ ಮಣಿದು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಆದ್ದರಿಂದ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ನಿರ್ದೇಶಿಸಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಪ್ರಧಾನ ಕಾರ್ಯದರ್ಶಿ ಮೂರು ತಿಂಗಳ ಒಳಗಾಗಿ ವರದಿ ಜಾರಿಗೊಳಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.