ಗುರುವಾರ , ಡಿಸೆಂಬರ್ 8, 2022
18 °C

ಬ್ಯಾಂಕ್‌ ಭರವಸೆ: ಹೂಡಿಕೆದಾರರಿಂದ ಕ್ಲೇಮ್‌ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಣ್ವ ಸಮೂಹ ಸಂಸ್ಥೆಯ ಕಣ್ವ ಸೌಹಾರ್ದ ಕೋ–ಆಪರೇಟಿವ್ ಸೊಸೈಟಿ, ಹೂಡಿಕೆದಾರರು ಹಾಗೂ ಷೇರುದಾರರಿಗೆ ಹಣ ವಾಪಸ್‌ ನೀಡುವ ಭರವಸೆ ನೀಡಿದ್ದು, ಬ್ಯಾಂಕ್‌ ಗ್ರಾಹಕರು ಕ್ಲೇಂ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಬ್ಯಾಂಕ್‌ ಎದುರು ಕಳೆದ 15 ದಿನಗಳಿಂದಲೂ ಗ್ರಾಹಕರು ಕಾಣಿಸಿಕೊಳ್ಳುತ್ತಿದ್ದಾರೆ. ಬುಧವಾರವೂ ಗ್ರಾಹಕರ ಸರದಿ ಕಂಡುಬಂತು.

‘ಇದೊಂದು ಸುಳ್ಳು ಭರವಸೆ ಅಷ್ಟೆ’ ಎಂದು ಗುರು ರಾಘವೇಂದ್ರ ಕೋ–ಆಪರೇಟಿವ್ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆ ಮಹಾಪೋಷಕ ಶಂಕರ್ ಗುಹಾ ದ್ವಾರಕಾನಾಥ್ ಬೆಳ್ಳೂರು ತಿಳಿಸಿದ್ದಾರೆ.

ವಂಚನೆ ಪ್ರಕರಣದ ಸಂಬಂಧ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ನೂರಾರು ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿತ್ತು. ವಂಚನೆ ಸಂಬಂಧ ದೂರು ಆಧರಿಸಿ ಬ್ಯಾಂಕ್‌ನ ಹಲವರನ್ನು ಪೊಲೀಸರು ಬಂಧಿಸಿದ್ದರು. 

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಸೇರಿ ಕೆಲವು ಸಹಕಾರ ಬ್ಯಾಂಕ್‌ಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದ್ದು, ಈ ಬ್ಯಾಂಕ್‌ಗಳ ಷೇರುದಾರರಿಗೆ ನ್ಯಾಯ ಕಲ್ಪಿಸಲು ಆಗ್ರಹಿಸಿ ದೆಹಲಿ ಹಾಗೂ ನಗರದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಸಿಬಿಐ ತನಿಖೆಗೂ ಆಗ್ರಹಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು