ಮಂಗಳವಾರ, ಏಪ್ರಿಲ್ 20, 2021
32 °C

‘ಬಂಧಿತ ಯೋಜನಾ ಇಲಾಖೆಯ ಅಧಿಕಾರಿಯಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ದೇವೇಂದ್ರಪ್ಪ ಅವರು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿ ಅಲ್ಲ’ ಎಂದು ಕರ್ನಾಟಕ ನಗರ ಮತ್ತು ಗ್ರಾಮಾಂತರ ಇಲಾಖಾ ನೌಕರರ ಸಂಘ ಸ್ಪಷ್ಟನೆ ನೀಡಿದೆ. 

ಕಟ್ಟಡವೊಂದರ ಸ್ವಾಧೀನಾನುಭವ ಪತ್ರ (ಒ.ಸಿ) ನೀಡಲು ₹20 ಲಕ್ಷ ಲಂಚ ಪಡೆಯುತ್ತಿದ್ದ ಪಾಲಿಕೆಯ ಬೊಮ್ಮನಹಳ್ಳಿ ವಲಯದ ನಗರ ಯೋಜನಾ ಇಲಾಖೆಯ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಬಂಧಿಸಿತ್ತು.

‘ಬಂಧಿತರು ಪಾಲಿಕೆಯಿಂದ ಹಾಗೂ ಬೇರೆ ಇಲಾಖೆಗಳಿಂದ ನಿಯೋಜನೆಗೊಂಡು ಕೆಲಸ ನಿರ್ವಹಿಸುತ್ತಿರುವ ಅಧಿಕಾರಿ. ಅವರು ನಮ್ಮ ಇಲಾಖೆಗೆ ಒಳಪಡದೇ ಇರುವುದರಿಂದ ಹುದ್ದೆಯ ಪದನಾಮ ಬಳಕೆಯಿಂದ ಇಲಾಖೆಗೂ ಕೆಟ್ಟ ಹೆಸರು. ಈ ಸಂಬಂಧ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು, ಬಂಧಿತರ ಮಾತೃ ಇಲಾಖೆಯ ಪದನಾಮ ನೀಡಲು ಮನವಿ ಮಾಡಲಾಗುತ್ತಿದೆ’ ಎಂದು ಸಂಘದ ಅಧ್ಯಕ್ಷ ಆರ್‌.ಶೇಷ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.