ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ನಗರದಲ್ಲಿ ‘ಸ್ವಚ್ಛತೆಯೇ ಸೇವೆ’ ಅಭಿಯಾನ

Published : 24 ಸೆಪ್ಟೆಂಬರ್ 2024, 15:12 IST
Last Updated : 24 ಸೆಪ್ಟೆಂಬರ್ 2024, 15:12 IST
ಫಾಲೋ ಮಾಡಿ
Comments

ಬೆಂಗಳೂರು: ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದಡಿ ಬಿಬಿಎಂಪಿ ವತಿಯಿಂದ ‘ಸ್ವಚ್ಛತೆಯೇ ಸೇವೆ– 2024: ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ’ ಅಭಿಯಾನವನ್ನು ನಗರದಾದ್ಯಂತ ಹಮ್ಮಿಕೊಳ್ಳಲಾಗಿದೆ. 

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 155ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ, ಅವರ ಧ್ಯೇಯವಾಗಿದ್ದ ಸ್ವಚ್ಛತೆಯ ಹಾದಿಯಲ್ಲಿ ನಡೆಯಲು ಎಲ್ಲ ವಾರ್ಡ್‌ಗಳಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನ ಆಯೋಜಿಸಲಾಗಿದೆ.

ಈ ಅಭಿಯಾನದಲ್ಲಿ ನಾಗರಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪಾಲಿಕೆ ಅಧಿಕಾರಿಗಳು, ಮಾರ್ಷಲ್‌ಗಳು, ಪೌರಕಾರ್ಮಿಕರು, ಎನ್‌ಜಿಒಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆಗೆ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಅದರ ಜೊತೆಗೆ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸಲಾಗುತ್ತಿದೆ. ಪ್ರತಿಜ್ಞಾ ವಿಧಿ ಬೋಧಿಸಲಾಗುತ್ತಿದೆ.

ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರ ನೇತೃತ್ವದಲ್ಲಿ ಸ್ವಚ್ಛತಾ ಶ್ರಮದಾನ, ಜಾಗೃತಿ ಜಾಥಾ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ರಸ್ತೆ ಬದಿ, ಪಾದಚಾರಿ ಮಾರ್ಗಗಳಲ್ಲಿ ಕಸ ಎಸೆದು ‘ಬ್ಲ್ಯಾಕ್ ಸ್ಪಾಟ್’ ಆಗಿರುವ ಸ್ಥಳಗಳನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ, ಹೂ ಕುಂಡಗಳನ್ನಿಟ್ಟು, ಗೋಡೆಗಳಿಗೆ ಬಣ್ಣ ಬಳಿದು ಮತ್ತೆ ಆ ಸ್ಥಳದಲ್ಲಿ ಕಸ ಹಾಕದಂತೆ ಜಾಗೃತಿ ಮೂಡಿಸಲಾಗುತ್ತಿದೆ.

55 ಟನ್ ತ್ಯಾಜ್ಯ ಸಂಗ್ರಹ: ಸೆ.14ರಿಂದ ಸ್ವಚ್ಛತಾ ಅಭಿಯಾನದಲ್ಲಿ 55 ಕಿ.ಮೀ. ರಸ್ತೆಗಳು ಮತ್ತು ಇತರೆ ಸ್ಥಳಗಳನ್ನು ಸ್ವಚ್ಛಗೊಳಿಸಲಾಗಿದೆ. ಸುಮಾರು 50 ಟನ್ ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಸ್ವಚ್ಛ ಬೆಂಗಳೂರಿಗಾಗಿ ಪ್ರತಿಜ್ಞೆ

ಕಸವನ್ನು ಬೇರ್ಪಡಿಸಿ ಹಾಕುತ್ತೇನೆ. ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ ನಿಮ್ಮ ಜಾಗವನ್ನು ಗೌರವಿಸಿ. ಬೀದಿಗಳಲ್ಲಿ ಉಗುಳಬೇಡಿ ಅವುಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ ಉಗುಳುವುದು ಬೇಡ. ಪೌರಕಾರ್ಮಿಕರನ್ನು ಗೌರವಿಸಿ ಜಾಗವನ್ನು ಸ್ವಚ್ಛವಾಗಿಡುವ ಕೈಗಳನ್ನು ಗೌರವಕೊಡಿ... ಹೀಗೆಂದು ನಗರದ ಎಲ್ಲಾ ನಾಗರಿಕರು ಸ್ವಚ್ಛತಾ ಪ್ರತಿಜ್ಞೆ ಕೈಗೊಳ್ಳಬಹುದು. ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪಾಲಿಕೆಯ ಜೊತೆ ಕೈ ಜೋಡಿಸಬಹುದು.  https://cleanblr.bbmp.gov.in/pledge.php ಲಿಂಕ್‌ನಲ್ಲಿ ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT