ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಪಾದಚಾರಿ ಮಾರ್ಗ ಒತ್ತುವರಿ ತೆರವು

Published 24 ನವೆಂಬರ್ 2023, 14:11 IST
Last Updated 24 ನವೆಂಬರ್ 2023, 14:11 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ಅನಧಿಕೃತವಾಗಿ ಒಎಫ್‌ಸಿ ಕೇಬಲ್‌ಗಳನ್ನು ಬಿಬಿಎಂಪಿ ಸಿಬ್ಬಂದಿ ಶುಕ್ರವಾರ ತೆರವುಗೊಳಿಸಿದರು.

ಶಾಂತಿನಗರ, ಶಿವಾಜಿನಗರ, ಸಿ.ವಿ. ರಾಮನ್‌ನಗರ, ಪುಲಕೇಶಿನಗರ, ಸರ್ವಜ್ಞನಗರ ಮತ್ತು ಹೆಬ್ಬಾಳ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂಗಡಿ, ಮಳಿಗೆಗಳ ಚಾವಣಿ, ಅನುಪಯುಕ್ತ ತಳ್ಳುವ ಗಾಡಿ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ಸಿ ಕೇಬಲ್‌ಗಳ ತೆರವು ಕಾರ್ಯಾಚರಣೆ ನಡೆಯಿತು.

7.85 ಕಿ.ಮೀ ವ್ಯಾಪ್ತಿಯ ರಸ್ತೆಯಲ್ಲಿ 104 ಅನುಪಯುಕ್ತ ತಳ್ಳುವ ಗಾಡಿ ಜಪ್ತಿ ಮಾಡಲಾಗಿದೆ. 36 ಪಾದಚಾರಿ ಮಾರ್ಗಕ್ಕೆ ಚಾಚಿಕೊಂಡ ಅಂಗಡಿಗಳ ಚಾವಣಿ, 52 ಅನಧಿಕೃತ ನಾಮಫಲಕಗಳು, 3,700 ಮೀಟರ್ ಅನಧಿಕೃತ ಓಎಫ್‌ಸಿ ಕೇಬಲ್‌ಗಳು ಹಾಗೂ ಎರಡು ಅನಧಿಕೃತ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಎಂದು ವಲಯ ಜಂಟಿ ಆಯುಕ್ತೆ ಕೆ.ಆರ್ ಪಲ್ಲವಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT