ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರ ಪ್ರದಕ್ಷಿಣೆ ಆರಂಭಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

Last Updated 23 ಜುಲೈ 2021, 6:36 IST
ಅಕ್ಷರ ಗಾತ್ರ

ಬೆಂಗಳೂರು: ರಾಜೀನಾಮೆ ಪ್ರಹಸನದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಬೆಂಗಳೂರು ನಗರ ಪ್ರದಕ್ಷಿಣೆ ಆರಂಭಿಸಿದ್ದಾರೆ.

ಸ್ಮಾರ್ಟ್ ಸಿಟಿ, ಟೆಂಡರ್ ಶ್ಯೂರ್ ಮತ್ತು ವೈಟ್ ಟಾಪಿಂಗ್ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಗಾಂಧಿನಗರ, ನಾಯಂಡಹಳ್ಳಿ ಜಂಕ್ಷನ್‌, ಕಮರ್ಷಿಯಲ್ ಸ್ಟ್ರೀಟ್, ಎಂ.ಜಿ.ರಸ್ತೆ ಸೇರಿ ಒಟ್ಟು 16 ಕಡೆಗಳಲ್ಲಿ ಕಾಮಗಾರಿ ಪರಿಶೀಲನೆ ನಡೆಸಲಿದ್ದಾರೆ‌.

ಸುಮಾರು ಎರಡೂವರೆ ಗಂಟೆಗಳ ಕಾಲ ನಗರ ಪ್ರದಕ್ಷಿಣೆ ನಡೆಸಿ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ಬಿಎಂಟಿಸಿ ಓಲ್ವೊ ಬಸ್ ನಲ್ಲೇ ಮುಖ್ಯಮಂತ್ರಿ ತೆರಳುತ್ತಿದ್ದು, ಸಚಿವರಾದ ಬೈರತಿ ಬಸವರಾಜ್, ಆರ್.ಅಶೋಕ್, ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ ಜೊತೆಗಿದ್ದಾರೆ.

ಮುಖ್ಯಮಂತ್ರಿ ತೆರಳು ಮಾರ್ಗದಲ್ಲಿ ಬೇರೆ ವಾಹನಗಳ ಸಂಚಾರ ತಡೆಯಲಾಗಿದೆ. ಇದರಿಂದ ವಾಹನಗಳು ಕಿಲೋಮೀಟರ್ ತನಕ ಸಾಲುಗಟ್ಟಿ ನಿಂತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT