ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಪಿಪಿ ಮಾದರಿಯಲ್ಲಿ ಮೂಲಸೌಲಭ್ಯ ಅಭಿವೃದ್ಧಿ: ಅಧಿಕಾರಿಗಳಿಗೆ ಬಿಎಸ್‌ವೈ ಸೂಚನೆ

Last Updated 30 ಮೇ 2020, 20:48 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರದಿಂದ ಶೀಘ್ರವಾಗಿ ಅಂತಿಮ ಮಂಜೂರಾತಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ‘ಹಾಸನ–ಮಂಗಳೂರು ರೈಲು ಅಭಿವೃದ್ಧಿ ಕಂಪನಿ, ಕುಡಚಿ -ಬಾಗಲಕೋಟೆ ರೈಲ್ವೆ ಯೋಜನೆ ಅನುಷ್ಠಾನಕ್ಕೆ ಎದುರಾಗಿರುವ ಅಡಚಣೆ ಬಗೆಹರಿಸಲು ಕೂಡಾ ಕ್ರಮ ತೆಗೆದುಕೊಳ್ಳಬೇಕು’ ಎಂದು ಸೂಚಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕ –ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಕೃಷಿ, ಶಿಕ್ಷಣ, ಇಂಧನ, ಆರೋಗ್ಯ, ನೀರಾವರಿ, ಪ್ರವಾಸೋದ್ಯಮ, ಕ್ರೀಡೆ ಮತ್ತು ಯುವಜನ, ಕೈಗಾರಿಕೆ, ಸಾರಿಗೆ ಮತ್ತು ಸಾಗಣೆ, ವಸತಿ, ಗ್ರಾಮೀಣಾಭಿವೃದ್ಧಿ, ದೂರ ಸಂಪರ್ಕ ಸೇರಿದಂತೆ 14 ವಲಯಗಳಲ್ಲಿ ಮೂಲಸೌಲಭ್ಯ ಯೋಜನೆ ಕೈಗೊಳ್ಳಲು ಕೇಂದ್ರ ಸರ್ಕಾರ ಆದ್ಯತೆ ನೀಡಿರುವುದರಿಂದ ‌ಯೋಜನೆ
ಗಳನ್ನು ಕೈಗೆತ್ತಿಕೊಳ್ಳಲು ಕೂಡಾ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

‘ರಾಜ್ಯದಲ್ಲಿ ಈಗಾಗಲೇ ₹ 500 ಕೋಟಿ ಮೊತ್ತದ ಪಿಪಿಪಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ವಿಮಾನ ನಿಲ್ದಾಣಗಳ ಅಭಿವೃದ್ಧಿ , ಬೆಂಗಳೂರು ಸಿಗ್ನೇಚರ್ ಬ್ಯುಸಿನೆಸ್ ಪಾರ್ಕ್ ಯೋಜನೆಗಳಲ್ಲಿಯೂ ಪ್ರಗತಿ ಸಾಧಿಸಬೇಕಿದೆ’ ಎಂದೂ ಸಲಹೆ ನೀಡಿದರು.

ಯೋಜನೆಗಳ ಪ್ರಗತಿ ಕುರಿತು ಸಭೆಗೆ ಮಾಹಿತಿ ನೀಡಿದ ಅಧಿಕಾರಿಗಳು, ‘ರಾಜ್ಯದಲ್ಲಿ ಶಿವಮೊಗ್ಗ –ರಾಣೆಬೆನ್ನೂರು ಮಾರ್ಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಸ್ತುತ ಏಳು ನೂತನ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT