ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹುದ್ದೆ ಜಗ್ಗಾಟದಿಂದ ಅಭಿವೃದ್ಧಿ ಸ್ಥಗಿತ: ಶೋಭಾ ಕರಂದ್ಲಾಜೆ

Published 7 ಜುಲೈ 2024, 18:47 IST
Last Updated 7 ಜುಲೈ 2024, 18:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಜಗ್ಗಾಟ ನಡೆಯುತ್ತಿದ್ದು, ಅಭಿವೃದ್ಧಿ ಸ್ಥಗಿತವಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಕರ್ನಾಟಕ ಮೆಮೊರಿ ಚಾಂಪಿಯನ್‌ಶಿಪ್‌’ ಕಾರ್ಯಕ್ರಮದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ಅಧಿಕಾರಕ್ಕಾಗಿ ಹಗ್ಗಜಗ್ಗಾಟ ನಡೆಸುತ್ತಿದ್ದಾರೆ. ಇದರಿಂದಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಅವರು ಆರೋಪಿಸಿದರು.

ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚುತ್ತಿವೆ. ಝೀಕಾ ಸೋಂಕು ಸಹ ತೀವ್ರವಾಗಿದೆ. ಆಸ್ಪತ್ರೆಗೆ ಬಹಳಷ್ಟು ಜನರು ದಾಖಲಾಗುತ್ತಿದ್ದಾರೆ. ಆದರೆ ಸರಿಯಾದ ಚಿಕಿತ್ಸೆ, ಔಷಧ ದೊರೆಯುತ್ತಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT