7

ಎಡಿಜಿಪಿ ರಾಮಚಂದ್ರರಾವ್‌ಗೆ ಸಿ.ಎಂ ತರಾಟೆ

Published:
Updated:

ಬೆಂಗಳೂರು: ವಿಜಯಪುರದ ಭೀಮಾತೀರದ ರೌಡಿಶೀಟರ್‌ ಗಂಗಾಧರ ಚಡಚಣನ ನಿಗೂಢ ನಾಪತ್ತೆ ಹಾಗೂ ಕೊಲೆ ಪ್ರಕರಣ ಸಂಬಂಧ ಎಡಿಜಿಪಿ ಡಾ.ಕೆ. ರಾಮಚಂದ್ರರಾವ್‌ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ಪ್ರಕರಣ ನಡೆದ ಸಂದರ್ಭದಲ್ಲಿ ರಾಮಚಂದ್ರರಾವ್‌, ಬೆಳಗಾವಿ ಉತ್ತರ ವಲಯ ಐಜಿಪಿ ಆಗಿದ್ದರು. ಸಭೆಯಲ್ಲಿ ಪ್ರಕರಣದ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು. 

‘ಪೊಲೀಸರೇ ಸುಪಾರಿ ಪಡೆಯೋದಾ. ಇದು ನಾಚಿಕೆಯ ಸಂಗತಿ. ಯಾವುದೇ ಅಧಿಕಾರಿ ಈ ರೀತಿ ಮಾಡಬಾರದು’ ಎಂದು ಕುಮಾರಸ್ವಾಮಿ ಎಚ್ಚರಿಸಿದರು. ಅದಕ್ಕೆ ಉತ್ತರಿಸಲು ರಾಮಚಂದ್ರನ್ ತಡವರಿಸಿದರು. ‘ಆಯ್ತು ಕುಳಿತುಕೊಳ್ಳಿ’ ಎಂದು ಮುಖ್ಯಮಂತ್ರಿ ಹೇಳಿದರು.

ವರ್ಗಾವಣೆ ಮಾಡಲ್ಲ; ‘ಹೊಸ ಸರ್ಕಾರ ಬಂದ ಕೂಡಲೇ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತೇವೆ ಎಂಬ ಆರೋಪವಿದೆ. ಆದರೆ, ಅಂತಹ ವದಂತಿಗಳಿಗೆ ಕಿವಿಗೊಡಬೇಡಿ’ ಎಂದು ಕುಮಾರಸ್ವಾಮಿ ಹೇಳಿದರು.

‘ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಪೊಲೀಸರ ತನಿಖಾ ಪ್ರಗತಿಗೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಹೆಸರು ಮುಂದುವರಿಸಿಕೊಂಡು ಹೋಗುವ ಹೊಣೆಗಾರಿಕೆ ನಿಮ್ಮ ಮೇಲಿದೆ’ ಎಂದರು. 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !