ಮಂಗಳವಾರ, ಜನವರಿ 28, 2020
23 °C

ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ ಹತೋಟಿಗೆ ತರಲು ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ನಾನೇ ಪೊಲೀಸರಿಗೆ ಸೂಚಿಸಿದ್ದೆ ಎಂದು ಹೇಳಿದರು.

ಪೌರತ್ವ ಕಾಯ್ದೆ ವಿರೋಧಿಸಿ ಮಾತನಾಡುತ್ತಿರುವ ಯಾರೊಬ್ಬರೂ ಕಾಯ್ದೆಯಿಂದ ಮುಸ್ಲಿಮರಿಗೆ ಹೇಗೆ ತೊಂದರೆಯಾಗುತ್ತೆ ಎಂದು ವಿವರಿಸುತ್ತಿಲ್ಲ. ಕಾಯ್ದೆಯಿಂದ ದೇಶದಲ್ಲಿರುವ ಯಾವುದೇ ಮುಸ್ಲಿಮರಿಗೆ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದಿನ ವಾರದಲ್ಲಿ ದೆಹಲಿಗೆ ಹೋಗಿ, ವರಿಷ್ಠರ ಜೊತೆಗೆ ವಿವಿಧ ವಿಚಾರಗಳನ್ನು ಚರ್ಚಿಸುತ್ತೇನೆ ಎಂದು ಇದೇ ಸಂದರ್ಭ ಮಾಹಿತಿ ನೀಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು