ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ವಿಘ್ನ ಬಜೆಟ್ ಮಂಡನೆ: ಸಿ.ಎಂ ಪ್ರಾರ್ಥನೆ

Last Updated 2 ಮಾರ್ಚ್ 2021, 21:06 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರಹಳ್ಳಿ ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಂಗಳವಾರ ನಡೆದ ಹೋಮ ಹವನದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಈ ಬಾರಿಯ ಬಜೆಟ್ ಮಂಡನೆ ನಿರ್ವಿಘ್ನವಾಗಲಿ’ ಎಂದು ಪ್ರಾರ್ಥಿಸಿದರು.

ಮಠಕ್ಕೆ ಬಂದ ಮುಖ್ಯಮಂತ್ರಿ ಅವರನ್ನು ಮಂಗಳ ವಾದ್ಯಗಳೊಂದಿಗೆ ಆರತಿ ಬೆಳಗಿ ಸ್ವಾಗತಿಸಲಾಯಿತು. ಬಳಿಕ ಮಠದ ವತಿಯಿಂದ ನಡೆದ ನರಸಿಂಹ ಮಂತ್ರ ಹೋಮ‌ ಮತ್ತು ದುರ್ಗಾ ಮಂತ್ರ ಹೋಮದ ಪೂರ್ಣಾಹುತಿಯಲ್ಲಿ ಅವರು ಭಾಗವಹಿಸಿದರು. ಅರಿಷ್ಟ ನಿವಾರಕ ಮತ್ತು ಜಯ ಪ್ರಾಪ್ತಿಗಾಗಿ ಈ ಎರಡು ಹೋಮಗಳನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ‘ರಾಯರ ಸ್ಮರಣೆ ಮಾಡದೆ ಒಂದು ದಿನವೂ ನಾನು ಕಳೆದಿಲ್ಲ‌. ಅವರ ಆಶೀರ್ವಾದದಿಂದ ನಾನು ಈ ಸ್ಥಾನದಲ್ಲಿದ್ದೇನೆ.‌ ರಾಜ್ಯ ಎಲ್ಲ ವರ್ಗದವರಿಗೂ ಅನುಕೂಲವಾಗುವಂತೆ ಮಾರ್ಚ್ 8ರಂದು ಬಜೆಟ್ ಮಂಡಿಸುತ್ತೇನೆ’
ಎಂದರು.

ಕಂದಾಯ ಸಚಿವ ಆರ್. ಅಶೋಕ, ಶಾಸಕರಾದ ರಾಜು ಗೌಡ ಮತ್ತು ಎಂ. ಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT