ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆ: ತ್ವರಿತ ಅನುಮತಿಗೆ ಸಿಎಂ ಸಿದ್ದರಾಮಯ್ಯ ತಾಕೀತು

Published 29 ಡಿಸೆಂಬರ್ 2023, 16:02 IST
Last Updated 29 ಡಿಸೆಂಬರ್ 2023, 16:02 IST
ಅಕ್ಷರ ಗಾತ್ರ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಗಳಲ್ಲಿ ಸರ್ಕಾರಿ ಅಧಿಕಾರಿಗಳು, ನೌಕರರು ಮತ್ತು ಚುನಾಯಿತ ಪ್ರತಿನಿಧಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಲೋಕಾಯುಕ್ತವು ಸಲ್ಲಿಸುವ ಪ್ರಸ್ತಾವಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸರ್ಕಾರಿ ನೌಕರರು ಮತ್ತು ಚುನಾಯಿತ ಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತವು ಸಲ್ಲಿಸುವ ಪ್ರಸ್ತಾವಗಳ ಕುರಿತು ಶುಕ್ರವಾರ ಪರಿಶೀಲನಾ ಸಭೆ ನಡೆಸಿದ ಅವರು, ವಿವಿಧ ಇಲಾಖಾ ಮುಖ್ಯಸ್ಥರಿಂದ ಮಾಹಿತಿ ಪಡೆದರು.

‘ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡಲು ವಿಳಂಬ ಧೋರಣೆ ಅನುಸರಿಸಕೂಡದು. ಅಂತಹ ವರ್ತನೆಯನ್ನು ಸಹಿಸುವುದಿಲ್ಲ. ಬಾಕಿ ಇರುವ ಎಲ್ಲ ಪ್ರಸ್ತಾವಗಳನ್ನು ಪರಿಶೀಲಿಸಿ, ತ್ವರಿತವಾಗಿ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT