ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಬಿ–ಎಆರ್‌ಕೆ ಹೊಸ ಕಾರ್ಡ್‌ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Published 6 ಡಿಸೆಂಬರ್ 2023, 16:17 IST
Last Updated 6 ಡಿಸೆಂಬರ್ 2023, 16:17 IST
ಅಕ್ಷರ ಗಾತ್ರ

ಬೆಳಗಾವಿ: ಆಯುಷ್ಮಾನ್‌ ಭಾರತ್‌– ಆರೋಗ್ಯ ಕರ್ನಾಟಕ (ಎಬಿ–ಎಆರ್‌ಕೆ) ಫಲಾನುಭವಿಗಳಿಗೆ ವಿತರಿಸಲು ಆರೋಗ್ಯ ಇಲಾಖೆ ರೂಪಿಸಿರುವ ನೂತನ ಕಾರ್ಡ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದರು.

ಹೊಸ ಕಾರ್ಡ್‌ಗಳಿಗೆ ‘ಆಯುಷ್ಮಾನ್‌ ಭಾರತ್‌– ಪ್ರಧಾನಮಂತ್ರಿ ಜನಾರೋಗ್ಯ– ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ ಕಾರ್ಡ್‌ ಎಂದು ಹೆಸರಿಸಲಾಗಿದೆ. ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ಗುರುತಿನ ಚೀಟಿಯೊಂದಿಗೆ ಜೋಡಿಸಲಾಗುತ್ತದೆ.

ಹೊಸ ಕಾರ್ಡ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ‘ಆಯುಷ್ಮಾನ್‌ ಭಾರತ್ - ಆರೋಗ್ಯ ಕರ್ನಾಟಕ ಕಾರ್ಡ್‌ನಲ್ಲಿ ಕೆಲವು ಬದಲಾವಣೆ ತರಲಾಗಿದೆ. ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್‌ಗಳನ್ನು ವಿತರಿಸುವ ಗುರಿ ಇದೆ’ ಎಂದರು.

ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ₹ 5 ಲಕ್ಷದವರೆಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೂ ಈ ಯೋಜನೆಯಡಿ ಸೌಲಭ್ಯ ಒದಗಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಎಪಿಎಲ್‌ ಕುಟುಂಬಗಳ ಫಲಾನುಭವಿಗಳು ಚಿಕಿತ್ಸಾ ವೆಚ್ಚದ ಶೇ 70ರಷ್ಟನ್ನು ಭರಿಸಿದರೆ, ರಾಜ್ಯ ಸರ್ಕಾರ ಶೇ 30ರಷ್ಟನ್ನು ನೀಡುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT