ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ.ಆರ್ ತಾಂತ್ರಿಕ ಮಹಾವಿದ್ಯಾಲಯ: 1,201 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Published 11 ಮೇ 2023, 19:29 IST
Last Updated 11 ಮೇ 2023, 19:29 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಎಂ.ಆರ್ ತಾಂತ್ರಿಕ ಮಹಾವಿದ್ಯಾಲಯದ 1,201 ವಿದ್ಯಾರ್ಥಿಗಳಿಗೆ ಗುರುವಾರ ಪದವಿ ಪ್ರಮಾಣ ಪತ್ರಗಳನ್ನು ನೀಡಲಾಯಿತು.

ಗುರುವಾರ ನಡೆದ 20ನೇ ಪದವಿ ಪ್ರದಾನ ಕಾರ್ಯಕ್ರಮದಲ್ಲಿ 2022–23ನೇ ಸಾಲಿನಲ್ಲಿ ಎಂಜಿನಿಯರಿಂಗ್‌, ಮ್ಯಾನೇಜ್‌ಮೆಂಟ್‌, ಕಂಪ್ಯೂಟರ್‌ ಅಪ್ಲಿಕೇಷನ್‌ ಕೋರ್ಸ್‌ಗಳಲ್ಲಿ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್‌ ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ್‌ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಿದರು. 

ನಂತರ ಮಾತನಾಡಿದ ಅವರು, ‘ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಬೇಕು. ಈ ಮೂಲಕ ಸದೃಢ ಭಾರತ ನಿರ್ಮಿಸಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಸೃಜನಶೀಲತೆ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನವೀನ ಆಲೋಚನೆಗಳನ್ನು ಮಾಡಬೇಕು. ಉದಯೋನ್ಮುಖ ಎಂಜಿನಿಯರ್‌ಗಳು ಈ ದೇಶದ ಭವಿಷ್ಯ' ಎಂದು ಹೇಳಿದರು.

ಸಿ.ಎಂ.ಆರ್ ವಿಶ್ವವಿದ್ಯಾಲಯದ ಅಧ್ಯಕ್ಷ ಡಾ. ಕೆ.ಸಿ. ರಾಮಮೂರ್ತಿ ಮತ್ತು ಸಿ.ಎಂ.ಆರ್. ಜ್ಞಾನಧಾರ ಟ್ರಸ್ಟ್‌ ಅಧ್ಯಕ್ಷ್ಯೆ, ಸಿ.ಎಂ.ಆರ್ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಬೀತಾ ರಾಮಮೂರ್ತಿ ಅವರು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು.

ಸಿ.ಎಂ.ಆರ್ ಜ್ಞಾನಧಾರ ಟ್ರಸ್ಟ್‌ನ ಟ್ರಸ್ಟಿ ಡಾ. ಕೆ.ಸಿ. ರಾಜು ರೆಡ್ಡಿ, ಪ್ರಾಂಶುಪಾರಾದ ಡಾ. ಸಂಜಯ್ ಜೈನ್, ಡಾ. ಬಿ.ಎನ್ ನರಸಿಂಹ ಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT