ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ‘ಕುಟುಂಬಶ್ರೀ’ ಮಾದರಿ ಸಬಲೀಕರಣಕ್ಕೆ ಮನವಿ: ಅಶ್ವತ್ಥನಾರಾಯಣ

Last Updated 2 ಆಗಸ್ಟ್ 2022, 2:44 IST
ಅಕ್ಷರ ಗಾತ್ರ

ಬೆಂಗಳೂರು: ಕೇರಳದ ಕುಟುಂಬಶ್ರೀ ಯೋಜನೆ ಮಾದರಿಯಲ್ಲೇ ರಾಜ್ಯದಲ್ಲಿ ಕೋಳಿ ಉತ್ಪಾದನೆ, ಮಾರುಕಟ್ಟೆ ಮತ್ತು ಮಾರಾಟವನ್ನು ಮಹಿಳಾ ಸ್ವಸಹಾಯ ಸಂಘಗಳಿಗೆ ವಹಿಸಲು ಆದೇಶಿಸಬೇಕು ಎಂದು ಕೋರಿ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಸಿ.ಎನ್.
ಅಶ್ವತ್ಥನಾರಾಯಣ ಪತ್ರ ಬರೆದಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಶು ಸಂಗೋಪನಾ ಸಚಿವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ 2 ಲಕ್ಷ ಸ್ವಸಹಾಯ ಸಂಘಗಳಿದ್ದು, 30 ಲಕ್ಷ ಮಹಿಳೆಯರು ತೊಡಗಿಸಿಕೊಂಡಿದ್ದಾರೆ.

ರಾಜ್ಯದ ಅಂಗನವಾಡಿ, ಮತ್ತು ಸರ್ಕಾರಿ ಶಾಲೆಗಳ ಮಕ್ಕಳಿಗೆ ಕೋಳಿ ಮೊಟ್ಟೆ ವಿತರಣೆ ಕಾರ್ಯವನ್ನೂ ಮಹಿಳಾ ಸ್ವಸಹಾಯ ಸಂಘಗಳಿಗೆ ವಹಿಸಬೇಕು. ಅದಕ್ಕಾಗಿ ಕೌಶಲಾಭಿವೃದ್ಧಿ ನಿಗಮದ ನೆರವು ಕೊಡಲು ಸಿದ್ಧ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT