ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎನ್‌ಜಿ ಚಾಲಿತ ಕಾರು ಬೆಂಕಿಗೆ ಆಹುತಿ

Published : 20 ಸೆಪ್ಟೆಂಬರ್ 2024, 15:25 IST
Last Updated : 20 ಸೆಪ್ಟೆಂಬರ್ 2024, 15:25 IST
ಫಾಲೋ ಮಾಡಿ
Comments

ಬೆಂಗಳೂರು: ರಸ್ತೆಬದಿಯಲ್ಲಿ ನಿಲುಗಡೆ ಮಾಡಿದ್ದ ಸಿಎನ್‌ಜಿ ಚಾಲಿತ ಕಾರು ಬೆಂಕಿಗೆ ಆಹುತಿಯಾಗಿದ್ದು, ಈ ಸಂಬಂಧ ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲಸ ಮುಗಿಸಿಕೊಂಡು ಬಂದಿದ್ದ ಕ್ಯಾಬ್ ಚಾಲಕ ಗುರುವಾರ ತಡರಾತ್ರಿ ರಸ್ತೆಬದಿಯಲ್ಲಿ ಕಾರು ನಿಲ್ಲಿಸಿದ್ದರು. ಅದೇ ಕಾರಿನಲ್ಲಿ ಚಾಲಕ ನಿದ್ರಿಸುತ್ತಿದ್ದರು. ಕಾರಿನ ಕಿಟಕಿ ತೆರೆದುಕೊಂಡಿದ್ದರು. ರಾತ್ರಿ 2 ಗಂಟೆ ಸುಮಾರಿಗೆ ಇದ್ದಕ್ಕಿದ್ದ ಹಾಗೆ ಕಾರಿನ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮಲಗಿದ್ದ ಚಾಲಕ ಕೂಡಲೇ ಕಾರಿನಿಂದ ಕೆಳಕ್ಕೆ ಇಳಿದು ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸುವಲ್ಲಿ ಯಶಸ್ವಿಯಾದರು. ಅಷ್ಟರಲ್ಲಿ ಕಾರು ಭಾಗಶಃ ಬೆಂಕಿಗೆ ಆಹುತಿ ಆಗಿತ್ತು’ ಎಂದು ಮೂಲಗಳು ತಿಳಿಸಿವೆ.

‘ಕಾರಿಗೆ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಸಾಧ್ಯತೆಯಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೂರು ಆಧರಿಸಿ, ಕಾರು ನಿಂತಿದ್ದ ಜಾಗದ ಅಕ್ಕಪಕ್ಕ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಪರಿಶೀಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT