ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಜೆಟ್ ಅಧಿವೇಶನ: ಸಹಕಾರ, ಸೌಹಾರ್ದ ಸಹಕಾರಿ ಮಸೂದೆಗಳ ಮಂಡನೆ

Published 15 ಫೆಬ್ರುವರಿ 2024, 16:04 IST
Last Updated 15 ಫೆಬ್ರುವರಿ 2024, 16:04 IST
ಅಕ್ಷರ ಗಾತ್ರ

ಬೆಂಗಳೂರು: ಸಹಕಾರಿ ಒಕ್ಕೂಟ, ಅಪೆಕ್ಸ್‌ ಸಹಕಾರ ಸಂಘ ಮತ್ತು ಜಿಲ್ಲಾ ಸಹಕಾರ ಸಂಘಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ‘ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ–2024’ ಅನ್ನು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು.

ಪ್ರಾಥಮಿಕ ಸಹಕಾರ ಸಂಘಗಳಲ್ಲಿ ನಾಮನಿರ್ದೇಶನದಲ್ಲಿ ಮೂರಕ್ಕೆ ಒಂದು ಸ್ಥಾನವನ್ನು ಮೀಸಲಾತಿ ಅಡಿಯಲ್ಲಿ ಒದಗಿಸಲು ಈ ಮಸೂದೆ ಅವಕಾಶ ಕಲ್ಪಿಸಲಿದೆ.

ಸೌಹಾರ್ದ ಸಹಕಾರಿ ಸಂಸ್ಥೆಗಳಲ್ಲಿ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅವಕಾಶ ಕಲ್ಪಿಸುವ ಮತ್ತು ಮೀಸಲಾತಿಯನ್ನು ಒದಗಿಸುವ ‘ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ–2024’ ಅನ್ನೂ ಸಹಕಾರಿ ಸಚಿವರು ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT