ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ, ನೀಟ್‌ ಪರೀಕ್ಷೆಗಳಿಗೆ ತರಬೇತಿ

Published 3 ಮಾರ್ಚ್ 2024, 19:17 IST
Last Updated 3 ಮಾರ್ಚ್ 2024, 19:17 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಸಿಇಟಿ–ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿ ಆಯೋಜಿಸಲಾಗಿದೆ.‌

ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ–ಸಿಇಟಿ ಮತ್ತು ನೀಟ್) ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು, ವಿಶ್ವವಿದ್ಯಾಲಯದ ಆವರಣದಲ್ಲಿರುವ ಪರೀಕ್ಷಾ ತರಬೇತಿ ಕೇಂದ್ರ0ದ ಕಚೇರಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಜೆ.ಶಶಿಕಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ 0821–2515944 ಅಥವಾ ಹತ್ತಿರದ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಲು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT