ಭಾನುವಾರ, ಮಾರ್ಚ್ 29, 2020
19 °C

ಕರಾವಳಿಗೆ ಪ್ರತ್ಯೇಕ ಮರಳು ನೀತಿ: ಶಾಸಕರ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಕರಾವಳಿ ಶಾಸಕರು ಸರ್ಕಾರವನ್ನು ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್‌ ಅವರ ಗಮನ ಸೆಳೆಯುವ ಸೂಚನೆಯಡಿ ಚರ್ಚೆಯ ಸಂದರ್ಭ ಬಿಜೆಪಿಯ ಸುನಿಲ್‌ ಕುಮಾರ್‌, ರಘುಪತಿ ಭಟ್‌ ಮತ್ತು ಇತರರು ಪ್ರತ್ಯೇಕ ಮರಳು ನೀತಿಯ ವಿಷಯ ಪ್ರಸ್ತಾಪಿಸಿದರು.

‘ಕರಾವಳಿಯ ಮೂರು ಜಿಲ್ಲೆಗಳ ನದಿಯಲ್ಲಿ ಮುಳುಗಿ ಮರಳು ತೆಗೆಯುವ ಕ್ರಮ ಬಹಳ ಹಿಂದಿನಿಂದಲೂ ಇದೆ. ಅದನ್ನು ಮುಂದುವರಿಸಬೇಕು. ಅದಕ್ಕಾಗಿ ನದಿಯಲ್ಲಿ ಮರಳು ಗಣಿಗಾರಿಕೆ ನಿಷೇಧವನ್ನು ತೆಗೆಯಬೇಕು. ಇದು ಕೇವಲ ಕರಾವಳಿಗೆ ಜಿಲ್ಲೆಗಳಿಗೆ ಮಾತ್ರ ಅನ್ವಯ ಆಗಬೇಕು’ ಎಂದು ಸುನಿಲ್‌ ಕುಮಾರ್‌ ಹೇಳಿದರು.

ನೂರಾರು ವರ್ಷಗಳಿಂದ ಇದೇ ಉದ್ಯೋಗ ಮಾಡಿಕೊಂಡು ಬಂದ ಕುಟುಂಬಗಳಿವೆ. ಮರಳು ತೆಗೆಯುವ ಲೈಸೆನ್ಸ್ ಅನ್ನು ಅವರಿಗೇ ನೀಡಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ರಘುಪತಿ ಭಟ್‌  ಮಾತನಾಡಿ, ಗುಜರಾತಿನಲ್ಲಿ ಇದಕ್ಕಾಗಿ ಪ್ರತ್ಯೇಕ ನೀತಿ ಇದೆ. ರಾಜ್ಯದ ಕರಾವಳಿ ಶಾಸಕರು ಮತ್ತು ಅಧಿಕಾರಿಗಳು ಅಲ್ಲಿಗೆ ತೆರಳಿ ಅಧ್ಯಯನ ನಡೆಸಿ ಬಂದಿದ್ದೇವೆ. ಗುಜರಾತಿನಲ್ಲೂ ಪರಂಪರಾಗತವಾಗಿ ಮರಳು ತೆಗೆಯುವ ಕುಟುಂಬಗಳಿಗೆ ಅನುಮತಿ ನೀಡಲಾಗುತ್ತಿದೆ. ರಾಜ್ಯದಲ್ಲೂ ಅದೇ ಮಾದರಿ ಅನುಸರಿಸುವಂತೆ ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು